ಕಾರ್ಕಳದಲ್ಲಿ ಸ್ಪರ್ಧಿಸಲು ಬಿಜೆಪಿ ಸಚಿವರು, ಶಾಸಕರು ನನಗೆ ಸಹಕಾರದ ಭರವಸೆ ನೀಡಿದ್ದಾರೆ : ಪ್ರಮೋದ್ ಮುತಾಲಿಕ್ – Vishwanews24
ಕಾರ್ಕಳದಲ್ಲಿ ಸ್ಪರ್ಧಿಸಲು ಬಿಜೆಪಿ ಸಚಿವರು, ಶಾಸಕರು ನನಗೆ ಸಹಕಾರದ ಭರವಸೆ ನೀಡಿದ್ದಾರೆ
ನಕಲಿ ಹಿಂದುತ್ವ ಮತ್ತು ಭ್ರಷ್ಟಾಚಾರದ ವಿರುದ್ದ ನನ್ನ ಸ್ಪರ್ಧೆ, ಗೆಲುವು ಖಚಿತ : ಪ್ರಮೋದ್ ಮುತಾಲಿಕ್
ಮಂಗಳೂರು: ಕಾರ್ಕಳದಲ್ಲಿ ಸ್ಪರ್ಧಿಸಲು ಬಿಜೆಪಿ ಸಚಿವರು, ಶಾಸಕರು ತನುಮನ ಧನದ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸ್ಪೋಟಕ ಹೇಳಿಕೆ ನೀಡಿದ್ದಾರೆ,
ಮಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುನಿಲ್ ಕುಮಾರ್ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಲ್ಪಡುತ್ತಿದ್ದು, ಮುಖ್ಯಮಂತ್ರಿ ರೇಸ್ ನಲ್ಲಿರುವ ಇತರ ಕೆಲವು ಬಿಜೆಪಿ ಮುಖಂಡರು ನನಗೆ ಸಹಕಾರದ ಭರವಸೆ ನೀಡಿದ್ದಾರೆ.
ಕಡಬ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ: ಬಾಲಕ ಮೃತ್ಯು – ಐವರು ಗಂಭೀರ – Vishwanews24
ಕಾರ್ಕಳದಲ್ಲಿ ನನ್ನ ಗೆಲುವು ಖಚಿತ. ನಕಲಿ ಹಿಂದುತ್ವ ಮತ್ತು ಭ್ರಷ್ಟಾಚಾರದ ವಿರುದ್ದ ನನ್ನ ಸ್ಪರ್ಧೆ ಎಂದರು.
ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಕಾರ್ಕಳ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಈಗಾಗಲೇ ಘೋಷಣೆ ಮಾಡಿದ್ದಾರೆ.
ಮಲ್ಪೆ: ಬೋಟ್ ನಿಂದ ಬಿದ್ದು ಗಂಭೀರ ಗಾಯಗೊಂಡ ಮೀನುಗಾರ ಮೃತ್ಯು – Vishwanews24
