ಕಾಲ್ತುಳಿತ ಪ್ರಕರಣ : ನಟ ಅಲ್ಲು ಅರ್ಜುನ್ ಗೆ ಜಾಮೀನು ಮಂಜೂರು – vishwanews24

Featured, ರಾಷ್ಟ್ರ ನ್ಯೂಸ್

ಚಿತ್ರಮಂದಿರದಲ್ಲಿ ಕಾಲ್ತುಳಿತ ಪ್ರಕರಣ : ನಟ ಅಲ್ಲು ಅರ್ಜುನ್ ಗೆ ಜಾಮೀನು ಮಂಜೂರು

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್​ಗೆ ತೆಲಂಗಾಣ ಹೈಕೋರ್ಟ್​ ಮಧ್ಯಂತರ ಜಾಮೀನು ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ರೆಗ್ಯುಲರ್ ಬೇಲ್ ಅಥವಾ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ನಾಂಪಲ್ಲಿ ಕೋರ್ಟ್​ನಲ್ಲಿ ಈ ಅರ್ಜಿಯ ವಿಚಾರಣೆಯೂ ನಡೆದಿದೆ. ಇಂದು (ಜನವರಿ 03) ನ್ಯಾಯಾಧೀಶರ ಆದೇಶ ಹೊರಬಿದ್ದಿದ್ದು, ಪ್ರಕರಣದಲ್ಲಿ ಅಲ್ಲು ಅರ್ಜುನ್​ಗೆ ಜಾಮೀನು ದೊರೆತಿದೆ.

ಡಿಸೆಂಬರ್ 04 ರಂದು ಹೈದರಾಬಾದ್​ನ ಸಂಧ್ಯಾ ಚಿತ್ರಮಂದಿರಕ್ಕೆ ಅಲ್ಲು ಅರ್ಜುನ್ ಭೇಟಿ ನೀಡಿದ್ದಾಗ ನಡೆದ ಕಾಲ್ತುಳಿತದಲ್ಲಿ ರೇವತಿ ಹೆಸರಿನ ಮಹಿಳೆ ಮೃತಪಟ್ಟಿದ್ದರು. ಅವರ ಪುತ್ರ ಗಂಭೀರವಾಗಿ ಗಾಯಗೊಂಡು ಈಗಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಮೃತ ಮಹಿಳೆಯ ಪತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಆಧರಿಸಿ ಹೈದರಾಬಾದ್ ಪೊಲೀಸರು ಅಲ್ಲು ಅರ್ಜುನ್ ಸೇರಿದಂತೆ ಸಂಧ್ಯಾ ಚಿತ್ರಮಂದಿರ ಮಾಲೀಕ ಹಾಗೂ ಮ್ಯಾನೇಜರ್ ಅನ್ನು ಬಂಧಿಸಿದ್ದರು.

ಉಡುಪಿ : ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳ ಪಂಚಮ ಆರಾಧನೋತ್ಸವ – vishwanews24

 

ಅಲ್ಲು ಅರ್ಜುನ್​ಗೆ ಈಗ ಷರತ್ತು ಬದ್ಧ ಜಾಮೀನು ಮಂಜೂರಾಗಿದ್ದು, ಜಾಮೀನು ನೀಡಿರುವ ನಾಂಪಲ್ಲಿ ನ್ಯಾಯಾಲಯ, 1 ಲಕ್ಷ ರೂಪಾಯಿ ಭದ್ರತಾ ಮೊತ್ತ ಮತ್ತು ಇಬ್ಬರು ವ್ಯಕ್ತಿಗಳ ಶೂರಿಟಿಯನ್ನು ಕೇಳಿದೆ. ವಿದೇಶ ಪ್ರಯಾಣದ ಮೇಲೆ ಯಾವುದೇ ನಿರ್ಭಂಧ ವಿಧಿಸಿಲ್ಲ ಎನ್ನಲಾಗುತ್ತಿದೆ.

ಗಂಗೊಳ್ಳಿ: ಗ್ರಾಪಂ ಕಚೇರಿಯಲ್ಲಿ ಮೌಲ್ವಿಯಿಂದ ಪ್ರಾರ್ಥನೆ ; ಕ್ರಮಕ್ಕೆ ಆಗ್ರಹಿಸಿ ಶಾಸಕರ ನೇತೃತ್ವದಲ್ಲಿ ಸಂಘಟನೆ ಕಾರ್ಯಕರ್ತರ ಪ್ರತಿಭಟನೆ – vishwanews24

 

Leave a Reply