ಕಾಶ್ಮೀರ ವಿದ್ಯಾರ್ಥಿಗಳ ಪಾಕ್ ಪರ ಘೋಷಣೆ ಪ್ರಕರಣ : ವಿದ್ಯಾರ್ಥಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ -Vishwanews24

Featured, ರಾಜ್ಯ ನ್ಯೂಸ್

ಹುಬ್ಬಳ್ಳಿ : ಕೆಎಲ್ ಇ ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹುಬ್ಬಳ್ಳಿ ನ್ಯಾಯಾಲಯ ಇಂದು ವಜಾಗೊಳಿಸಿದೆ.

ಹುಬ್ಬಳ್ಳಿಯ 5ನೇ ಅಪರ ಜಿಲ್ಲಾ ಕೋರ್ಟ್ ನ ನ್ಯಾಯಮೂರ್ತಿ ಕೆ.ಎನ್.ಗಂಗಾಧರ ಅವರು ಈ ಹಿಂದೆ ಅರ್ಜಿಯ ವಿಚಾರಣೆ ನಡೆಸಿ ಇಂದಿಗೆ ತೀರ್ಪು ಕಾಯ್ದಿರಿಸಿದ್ದರು. ಇಂದು ಎಲ್ಲ ರೀತಿಯ ಪರಿಶೀಲನೆ ನಡೆಸಿದ ನ್ಯಾಯಮೂರ್ತಿಗಳು, ಕಾಶ್ಮೀರಿ ವಿದ್ಯಾರ್ಥಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಮಾರ್ಚ್ 5ರಂದು ಕಾಶ್ಮೀರದ ಮೂವರು ವಿದ್ಯಾರ್ಥಿಗಳ ದೇಶದ್ರೋಹಿ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪರ ವಾದ ಮಂಡಿಸಲು ಹುಬ್ಬಳ್ಳಿಯ ವಕೀಲರು ಹಿಂದೇಟು ಹಾಕಿದ್ದರು. ನಂತರ ಬೆಂಗಳೂರಿನಿಂದ ಆಗಮಿಸಿದ ವಕೀಲರು ಆರೋಪಿಗಳ ಪರ ವಾದಮಂಡನೆ ಮಾಡಿದರು. ಮೈತ್ರೇಯಿ ಕೃಷ್ಣನ್ ನೇತೃತ್ವದ ಹತ್ತು ಜನ ವಕೀಲರ ತಂಡದಿಂದ ವಾದ ಮಂಡನೆ ಮಾಡಲಾಗಿತ್ತು. ಹಲವು ಪ್ರಕರಣಗಳ ಉದಾಹರಣೆ ಮೂಲಕ ಬೆಂಗಳೂರಿನ ವಕೀಲರ ತಂಡ ವಾದ ಮಂಡನೆ ಮಾಡಿತ್ತು. ಆದರೆ, ಕೋರ್ಟ್ ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ….