ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 19 ಜಿಂಕೆಗಳ ಅಸಹಜ ಸಾವು : ಈಶ್ವರ್ ಖಂಡ್ರೆ ಕಳವಳ, ತನಿಖೆಗೆ ಆದೇಶ – vishwanews24

Featured, ರಾಜ್ಯ ನ್ಯೂಸ್

ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 19 ಜಿಂಕೆಗಳ ಅಸಹಜ ಸಾವು : ಈಶ್ವರ್ ಖಂಡ್ರೆ ಕಳವಳ, ತನಿಖೆಗೆ ಆದೇಶ

ಬೆಳಗಾವಿ: ಜಿಲ್ಲೆಯ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ  ಕಿರು ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಸಾವನ್ನಪ್ಪಿರುವ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಳವಳ ವ್ಯಕ್ತಪಡಿಸಿದ್ದು, ತನಿಖೆಗೆ ಆದೇಶಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಪ್ರಾಥಮಿಕ ವರದಿಗಳ ಪ್ರಕಾರ ಜಿಂಕೆಗಳು ಸಾಂಕ್ರಾಮಿಕ ಕಾಯಿಲೆಯಿಂದ ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹೀಗಾಗಿ ಮೃಗಾಲಯದ ಬೇರೆ ಯಾವುದೇ ಪ್ರಾಣಿಗಳಿಗೂ ಸೋಂಕು ತಗುಲದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಮಂಗಳೂರು:  ಪಣಂಬೂರಿನಲ್ಲಿ ಭೀಕರ ಸರಣಿ ರಸ್ತೆ ಅಪಘಾತ ; ಮೂವರು ಸ್ಥಳದಲ್ಲೇ ಮೃತ್ಯು – vishwanews24

ಇನ್ನೂ ಈ ಜಿಂಕೆಗಳು ಕಲುಷಿತ ನೀರು, ಆಹಾರ ಸೇವಿಸಿ ಕಾಯಿಲೆಗೆ ತುತ್ತಾಗಿ ಮೃತಪಟ್ಟಿವೆಯೇ ಅಥವಾ ಬೆಕ್ಕು ಹಾಗೂ ಇನ್ನಿತರ ಸಾಕು ಪ್ರಾಣಿಗಳಿಂದ ಈ ಕಾಯಿಲೆ ಹರಡಿದೆಯೇ ಎಂಬ ಬಗ್ಗೆ ತಜ್ಞರ ಸಮಿತಿ ರಚಿಸಿ, ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಮೃಗಾಲಯದಲ್ಲಿರುವ ಪ್ರಾಣಿಗಳು ಈ ರೀತಿ ಸಾವಿಗೀಡಾಗುವುದು ಆತಂಕದ ವಿಚಾರವಾಗಿದ್ದು, ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವಿದ್ದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಆದೇಶ ನೀಡಿದ್ದಾರೆ.

ಚಿಕ್ಕಮಗಳೂರು : ಸೆಲ್ಫಿ ತೆಗೆಯಲು ಹೋಗಿ ಕಾಲು ಜಾರಿ ಜಲಪಾತಕ್ಕೆ ಬಿದ್ದು ಯುವಕ ಮೃತ್ಯು – vishwanews24

Leave a Reply