ಕುಂದಾಪುರ: ಏ.20 ಕ್ಕೆ ಗುರುರಾಜ್ ಗಂಟಿಹೊಳೆ ನಾಮಪತ್ರ ಸಲ್ಲಿಕೆ : ಬಿ.ಎಸ್ ಯಡಿಯೂರಪ್ಪ ಭಾಗಿ – Vishwanews24
ಕುಂದಾಪುರ: ಏ.20 ರಂದು ಬಿಜೆಪಿ ಕಾರ್ಯಕರ್ತರ ಬ್ರಹತ್ ಸಮಾವೇಶ
ಗುರುರಾಜ್ ಗಂಟಿಹೊಳೆ ನಾಮಪತ್ರ ಸಲ್ಲಿಕೆ – ಬಿ.ಎಸ್ ಯಡಿಯೂರಪ್ಪ ಭಾಗಿ
ಕುಂದಾಪುರ: ಈಗಾಗಲೇ ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಏಪ್ರಿಲ್ 20 ರಂದು ಗುರುವಾರ ಬಿಜೆಪಿ ಕಾರ್ಯಕರ್ತರ ಬ್ರಹತ್ ಸಮಾವೇಶ ನಡೆಯಲಿದ್ದು ಆ ನಂತರ ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಗುರುರಾಜ್ ಗಂಟಿಹೊಳೆ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾಗಿ ಆಗಲಿದ್ದಾರೆ ಎಂದು ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹೇಳಿದರು.
ಮೂಡುಬಿದಿರೆ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ನಾಮಪತ್ರ ಸಲ್ಲಿಕೆ – Vishwanews24
ಬೈಂದೂರು ಬಿಜೆಪಿ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಬೈಂದೂರುನಲ್ಲಿ ಬಿಜೆಪಿ ಸದೃಡವಾಗಿದೆ ನಮ್ಮ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ ಪಕ್ಷದಿಂದ ಯಾವುದೇ ಕಾರ್ಯಕರ್ತರು ಹೊರಹೋಗುವುದಿಲ್ಲ.
ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಇಪ್ಪತೈದು ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಗುರುರಾಜ ಗಂಟಿಹೊಳೆ,ಬೈಂದೂರು ಮಂಡಲದ ಚುನಾವಣಾ ಪ್ರಭಾರಿ ಕ್ಯಾ.ಬ್ರಿಜೇಶ್ ಚೌಟ,ಬಿಜೆಪಿ ಮಂಡಲದ ಉಪಾಧ್ಯಕ್ಷ ಗಣೇಶ ಗಾಣಿಗ,ಜಗನ್ನಾಥ ಮೊಗವೀರ ಉಪಸ್ಥಿತರಿದ್ದರು.
ಮೂಡುಬಿದಿರೆ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ನಾಮಪತ್ರ ಸಲ್ಲಿಕೆ – Vishwanews24
