ಕುಂದಾಪುರ : ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಅನ್ನು ಮಕ್ಕಳಿಗೆ ಆಟವಾಡಲು ನೀಡಿ : ಹಾಲಾಡಿ ಶ್ರೀನಿವಾಸ ಶೆಟ್ಟಿ  – Vishwanews24

Featured, ಉಡುಪಿ

ಕುಂದಾಪುರ : ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಅನ್ನು ಮಕ್ಕಳಿಗೆ ಆಟವಾಡಲು ನೀಡಿ : ಹಾಲಾಡಿ ಶ್ರೀನಿವಾಸ ಶೆಟ್ಟಿ 

ಕುಂದಾಪುರ: 2023 ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಕಾರ್ಡ್ ಹಂಚುವ ಮುಖೇನ ಜನರನ್ನು ವಂಚಿಸುತ್ತಿದೆ. ಡಿಸಿ, ತಹಶೀಲ್ದಾರ್, ಮುಖ್ಯ ಮಂತ್ರಿಗಳ ಸಹಿಯನ್ನು ಹೊಂದಿರದ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಅನ್ನು ಮಕ್ಕಳಿಗೆ ಆಟವಾಡಲು ನೀಡಿ ಎಂದು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು. ‌

ಕುಂದಾಪುರ ಕ್ಷೇತ್ರದ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಪರವಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಕಾಂಗ್ರೆಸ್ ಪಕ್ಷ ಆಡಳಿತವಿರುವ ರಾಜ್ಯಗಳಲ್ಲಿ ಕಾಂಗ್ರೆಸ್ ನೀಡಿದ ಗ್ಯಾರಂಟಿ ಕಾರ್ಡಿನ ಆಶ್ವಾಸನೆಗಳನ್ನು ಈಡೇರಿಕೆ ಮಾಡಲು ಸೋತ್ತಿದೆ.ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡಿಗೆ ಬೆಲೆ ಇಲ್ಲ,ಚುನಾವಣೆ ಸಂದರ್ಭದಲ್ಲಿ ಪ್ರಣಾಳಿಕೆ ಹಂಚಿರುವುದನ್ನು ನೋಡಿದ್ದೇನೆ ಗ್ಯಾರಂಟಿ ಕಾರ್ಡ್ ನೀಡುತ್ತಿರುವುದು ಇದೆ ಮೊದಲು ಎಂದರು. ಈ ಸಂದರ್ಭದಲ್ಲಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ,ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಕರಾವಳಿ ಕ್ಷೇತ್ರಗಳು ಬಿಜೆಪಿಯ ಭದ್ರಕೋಟೆ : ಪ್ರಮೋದ್ ಮಧ್ವರಾಜ್ – Vishwanews24

Leave a Reply