ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

Featured, ಉಡುಪಿ

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿದ್ದು, ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಲಾ‌ ಬೆಟ್ಟು, ಉಪ್ಪಿನಕುದ್ರು ಗ್ರಾಮದ ನಿವಾಸಿ ಸುಹಾಸ್ (23) ಜುಲೈ 13ರಂದು ಬೆಳಗ್ಗೆ ಸುಮಾರು 9 ಗಂಟೆಗೆ ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದರು. ಬಳಿಕ ಅವರು ಮನೆಗೆ ಮರಳಿಲ್ಲ ಎಂದು ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಮೊದಲು ಸಂಬಂಧಿಕರು ಹಾಗೂ ಸ್ನೇಹಿತರಲ್ಲಿ ವಿಚಾರಿಸಿದರೂ ಯಾವುದೇ ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ ತಡವಾಗಿ ದೂರು ದಾಖಲಿಸಲಾಗಿದೆ. ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

5 ಅಡಿ 9 ಇಂಚು ಎತ್ತರವಿದ್ದು,ನೇರಳೆ ಬಣ್ಣದ ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದರು. ಯುವಕನ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಕುಂದಾಪುರ ಪೊಲೀಸ್ ಠಾಣೆಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

Leave a Reply