ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಖಾಸಗಿ ಬಸ್ ; ವಿದ್ಯಾರ್ಥಿಗಳ ಸಹಿತ ಪ್ರಯಾಣಿಕರಿಗೆ ಗಾಯ – vishwanews24   

Featured, ಉಡುಪಿ

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಖಾಸಗಿ ಬಸ್ ; ವಿದ್ಯಾರ್ಥಿಗಳ ಸಹಿತ ಪ್ರಯಾಣಿಕರಿಗೆ ಗಾಯ    

ಕುಂದಾಪುರ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ಕೊಲ್ಲೂರು ಸಮೀಪದ ನಾಗೋಡಿ ಘಾಟಿ ಬಳಿ ಸೋಮವಾರ ನಡೆದಿದೆ.

ಶಿವಮೊಗ್ಗದಿಂದ ಕೊಲ್ಲೂರಿನತ್ತ ಬರುತ್ತಿದ್ದ ಬಸ್ ಪ್ರಯಾಣಿಕರಾಗಿದ್ದ ಕೊಲ್ಲೂರು ಪ್ರೌಢಶಾಲೆಯ 7 ಮಕ್ಕಳು ಹಾಗೂ ಕೊಲ್ಲೂರು ಜ್ಯೂನಿಯರ್ ಕಾಲೇಜಿನ 10 ವಿದ್ಯಾರ್ಥಿಗಳ ಸಹಿತ ಪ್ರಯಾಣಿಕರಿಗೆ ಗಾಯಗಳಾಗಿವೆ.

ಚಿಕ್ಕಮಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವಕನ ತಲೆಯ ಮೇಲೆ ಬಿದ್ದ ವಿದ್ಯುತ್ ಕಂಬ -vishwanews24

ಗಾಯಾಳು ವಿದ್ಯಾರ್ಥಿಗಳನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇವರೆಲ್ಲರೂ ಮಲೆನಾಡು ಭಾಗದ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ.

Leave a Reply