ಕುಂದಾಪುರ :  ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು – Vishwanews24

Featured, ಉಡುಪಿ

ಕುಂದಾಪುರ :  ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು

ಕುಂದಾಪುರ: ಕುಂದಾಪುರ ಪರಿಸರದಲ್ಲಿ ಹೆಸರು ಮಾಡಿರುವ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಅವರು ತಮ್ಮ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ,

ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬುವರ ಮನೆಯ ಸಿಟೌಟ್ ನಲ್ಲಿ ಭೋಜಣ್ಣ ಅವರು‌ ಆತ್ಮಹತ್ಯೆ ಮಾಡಿಕೊಂಡಿದ್ದು, ಭೂಮಿ ಹಾಗೂ ಹಣಕಾಸಿನ ವ್ಯವಹಾರವೇ ಆತ್ಮಹತ್ಯೆಗೆ ಕಾರಣ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.

ಕೋಟ್ಯಾಧಿಪತಿಯಾಗಿರುವ ಕಟ್ಟೆ ಭೋಜಣ್ಣ ಶೆಟ್ಟಿ, ಬೆಂಗಳೂರಿನಲ್ಲಿ ಹಲವಾರು ಹೋಟೆಲ್ ಗಳ ಮಾಲಕರಾಗಿದ್ದು, ಅವರ ಕುಂದಾಪುರದ ಚಿನ್ಮಯಿ ಆಸ್ಪತ್ರೆ ಉಡುಪಿ ಹಾಗೂ ಉ.ಕ ಜಿಲ್ಲೆಯಲ್ಲಿ ಹೆಸರುವಾಸಿಯಾಗಿದೆ. ಘಟನಾಸ್ಥಳಕ್ಕೆ ಕುಂದಾಪುರ ಪೊಲೀಸರು ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.

ಕಾಪು : ಪತ್ನಿಗೆ ವರದಕ್ಷಿಣೆ ಕಿರುಕುಳ: ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ ಪೊಲೀಸ್ ವಶಕ್ಕೆ – Vishwanews24

Leave a Reply