ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ
ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ ಮೂಲದ ನಿವಾಸಿ ಅಲ್ವಿನ್ ಪ್ರಕಾಶ್ ಕುಂದರ್ ಅವರ ಪಾರ್ಥಿವ ಶರೀರ ಶುಕ್ರವಾರ ಬೆಳಗ್ಗೆ ವಿಮಾನದ ಮೂಲಕ ಊರಿಗೆ ತರಲಾಗಿದ್ದು, ಕುಂದಾಪುರದ ಸಿಎಸ್ ಐ ಸಮುದಾದಯದ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನೆರವೇರಿತು.
ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಕಾಶ್ ಮೃತದೇಹವನ್ನು ಅಂಬುಲೆನ್ಸ್ ಮೂಲಕ ಕುಟುಂಬಸ್ಥರು ಕುಂದಾಪುರದ ಹೊನ್ನನಕೇರಿಯಲ್ಲಿರುವ ಮನೆಗೆ ತಂದು, ಅಲ್ಲಿ ಅಂತಿಮ ವಿಧಿಗಳನ್ನು ನೆರವೇರಿಸಿದರು. ಕುಂದಾಪುರದ ಸಿಎಸ್ ಐ ಕೃಪಾ ಚರ್ಚ್ ನ ಧರ್ಮಗುರು ರೇ.ಫಾ. ಇಮಾನ್ಯುವೆಲ್ ಜಯಕರ್ ಅಂತಿಮ ವಿಧಿಯ ಧಾರ್ಮಿಕ ಪ್ರಕ್ರಿಯೆಗಳನ್ನು ನೆರವೇರಿಸಿದರು.
ಅಲ್ಲಿಂದ ಕುಂದಾಪುರದ ಶಾಸ್ತ್ರಿ ಸರ್ಕಲ್ ಬಳಿ ಇರುವ ಅವರ ಸಮುದಾಯದ ರುದ್ರಭೂಮಿಗೆ ತಂದು ಸಕಲ ವಿಧಿಗಳನ್ನು ನೆರವೇರಿಸಿ, ಅಂತ್ಯಸಂಸ್ಕಾರ
ನೆರವೇರಿಸಲಾಯಿತು.
ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ಶಾಸಕ ಕಿರಣ್ ಕುಮಾರ್ ಕೊಡ್ಡಿ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ತ್ರ, ಸಹೋದರ ಪ್ರಶಾಂತ್ ಕುಂದರ್, ಅಕ್ಕ ಅನಿತಾ, ಅಪಾರ ಸಂಖ್ಯೆಯ ಕುಟುಂಬಸ್ಥರು, ಸ್ನೇಹಿತರು, ಬಂಧುಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.
