ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ
ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ನಗರದಲ್ಲಿ ಮಂಗಳವಾರ (ಜು.7) ವಿವಿಧ ಸಂಘಟನೆ ಹಾಗೂ ರೈತರಿಂದ ಮನವಿ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿ ಸರ್ಕಾರದ ಗಮನಕ್ಕಿದೆ. ಹೀಗಾಗಿ ಯಾವ ಸಾಲ ಮನ್ನಾ ಮಾಡಬೇಕು ಹಾಗೂ ಹೇಗೆ ಮಾಡಬೇಕೆಂಬುದನ್ನು ಪರಾಮರ್ಶಿಸಲಾಗುವುದು ಎಂದರು.
ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24
ರಾಜ್ಯದ ಬರ ಪರಿಸ್ಥಿತಿ ಅರಿಯಲು ಪ್ರವಾಸ ಕೈಗೊಳ್ಳಲಾಗಿದೆ. ಈಗ ಬೆಳಗಾವಿಗೆ ತೆರಳಿ ಅಲ್ಲೂ ಕೂಡಾ ವಾಸ್ತವ ಅರಿಯಲಾಗುವುದು. ಪ್ರವಾಸದ ನಂತರ ಸಂಬಂಧ ಪಟ್ಟವರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಅಂದರೆ ಯಾವ ರೀತಿ, ಯಾವ ಸಾಲ ಮನ್ನಾ ಎಂಬುದನ್ನು ಸಮಗ್ರವಾಗಿ ಅವಲೋಕಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ತಿಳಿಸಿದರು.
ಸಾರ್ವಜನಿಕರ, ರೈತರ ಸಮಸ್ಯೆ ಅರಿಯಲು ಪ್ರಜಾಸೇವೆ ರಚಿಸಲಾಗಿದ್ದು, ಶೀಘ್ರ ಸಚಿವರನ್ನು ನೇಮಕ ಮಾಡಲಾಗುವುದು. ಅದರಡಿಯೇ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದು ಸಿಎಂ ಡಿ ಕೆ ಶಿವಕುಮಾರ ಪುನರುಚ್ಚರಿಸಿದರು.
ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24
