ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ -Vishwanews24
ಬೆಂಗಳೂರು: ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಸೋಲಿನ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಅವರು ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಪತ್ರಿಕಾಗೋಷ್ಟಿ ನಡೆಸಿ ತಮ್ಮ ರಾಜೀನಾಮೆಯ ಬಗ್ಗೆ ಸ್ಪಷ್ಟಪಡಿಸಿದ ದಿನೇಶ್ ಗುಂಡೂರಾವ್ ” ಫಲಿತಾಂಶ ನಮ್ಮ ನಿರೀಕ್ಷೆಯಂತೆ ಬಂದಿಲ್ಲ, ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಿದ್ದಾನೆ, ಈಗಾಗಲೇ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಅವರಿಗೆ ರವಾನಿಸಿದ್ದೇನೆ” ಎಂದಿದ್ದಾರೆ.
“ಪಕ್ಷದ ಅಧ್ಯಕ್ಷ ಮಾನ್ಯ ಸೋನಿಯಾ ಗಾಂಧಿ ಅವರ ತೀರ್ಮಾನಕ್ಕೆ ಬದ್ದನಾಗಿದ್ದೇನೆ ಪಕ್ಷಕ್ಕೆ ನಿಷ್ಟೆಯಿಂದ ಕೆಲಸ ಮಾಡಿರುವ ಕಾರಣ ರಾಜೀನಾಮೆ ಬಗ್ಗೆ ಬೇಸರವಿಲ್ಲ” ಎಂದು ಹೇಳಿದ್ದಾರೆ.
