ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಿಕೆಶಿ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಿಸಲಾಗಿದೆ.

ದಲಿತ, ಲಿಂಗಾಯತ, ಅಲ್ಪಸಂಖ್ಯಾತ ಸಮುದಾಯಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಮೂವರು ಕಾರ್ಯಧ್ಯಕ್ಷರನ್ನು ನೇಮಿಸಲಾಗಿದ್ದು ಈಶ್ವರ್‌ ಖಂಡ್ರೆ, ಸತೀಶ್‌ ಜಾರಕಿಹೊಳಿ, ಸಲೀಂ ಅಹಮದ್‌ ಅವರು ಕಾರ್ಯಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಹಾಗೆಯೇ ವಿರೋಧ ಪಕ್ಷದ ನಾಯಕ ಹಾಗೂ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಮುಂದುವರಿಯಲಿದ್ದಾರೆ.

ನಾರಾಯಣಸ್ವಾಮಿ ವಿಧಾನ ಪರಿಷತ್‌ಗೆ ಹಾಗೂ ವಿಧಾನಸಭೆಗೆ ಅಜಯ್ ಸಿಂಗ್ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ.