ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1029.39 ಕೋಟಿ ರೂ. ಬರ ಪರಿಹಾರ ಘೋಷಣೆ -Vishwanews24

Featured, ದೇಶ, ರಾಷ್ಟ್ರ ನ್ಯೂಸ್

ಹೊಸದಿಲ್ಲಿ: ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1029.39 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಲಾಗಿದೆ. ಕಳೆದ ವರ್ಷ ಹಿಂಗಾರು ಅವಧಿಯಲ್ಲಿ ಸಂಭವಿಸಿದ ಬರಕ್ಕೆ ಕೇಂದ್ರ ಸರಕಾರ ಇದೀಗ ಪರಿಹಾರ ಘೋಷಣೆ ಮಾಡಿದೆ.

ಗೃಹ ಸಚಿವ ಅಮಿತ್‌ ಶಾ ಅಧ್ಯಕ್ಷತೆ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿದ್ದ ಉನ್ನತ ಮಟ್ಟದ ಸಮಿತಿ ಕೇಂದ್ರದಿಂದ ಹೆಚ್ಚುವರಿ ನೆರವು ಘೋಷಣೆ ಮಾಡಿದ್ದಾರೆ.

ಕರ್ನಾಟಕ, ಒಡಿಶಾ ಹಾಗೂ ಹಿಮಾಚಲ ಪ್ರದೇಶದಲ್ಲಿ ಉಂಟಾದ ನೈಸರ್ಗಿಕ ವಿಪತ್ತುಗಳಿಗೆ ಒಟ್ಟಾರೆ 4432.10 ಕೋಟಿ ರೂ. ನೆರವು ಘೋಷಣೆ ಮಾಡಿದೆ.

ಒಡಿಶಾದಲ್ಲಿ ಚಂಡಮಾರು ಫನಿಯಿಂದಾದ ಹಾನಿಗೆ 3338.22 ಕೋಟಿ ರೂ. ಘೋಷಣೆ ಮಾಡಲಾಗಿದ್ದು, ರಾಜ್ಯದಲ್ಲಿನ ಹಿಂಗಾರು ಅವಧಿಯ ಬರ ಪರಿಸ್ಥಿತಿಗಾಗಿ 1029.39 ಕೋಟಿ ರೂ. ನೆರವು ಘೋಷಣೆ ಮಾಡಿದೆ. ಅಂತೆಯೇ ಹಿಮಾಚಲ ಪ್ರದೇಶದಲ್ಲಿ ಉಂಟಾದ ಹಿಮಪಾತದಿಂದಾದ ನಷ್ಟ ಪರಿಹಾರವಾಗಿ 64.49 ಕೋಟಿ ರೂ. ನೆರವು ಘೋಷಣೆ ಮಾಡಿದೆ.