ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ: ಶಬರಿಮಲೆ ಭಕ್ತರಿಗೆ ರಾಜ್ಯ ಆರೋಗ್ಯ ಇಲಾಖೆಯ ಮಾರ್ಗಸೂಚಿ – vishwanews24

Featured, ದಕ್ಷಿಣ ಕನ್ನಡ, ರಾಷ್ಟ್ರ ನ್ಯೂಸ್

ಶಬರಿಮಲೆ ದರ್ಶನಕ್ಕೆಂದು ಕೇರಳಕ್ಕೆ ತೆರಳುವ ಭಕ್ತರಿಗೆ ಕರ್ನಾಟಕ ಆರೋಗ್ಯ ಇಲಾಖೆ ಮಹತ್ವದ ಸೂಚನೆ

ಕೇರಳ ರಾಜ್ಯದಲ್ಲಿ ಮಿದುಳು ತಿನ್ನುವ ಅಮೀಬಾ ಸೋಂಕು ಹೆಚ್ಚಳ

ಶಬರಿಮಲೆ ಯಾತ್ರಿಕರಿಗೆ ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಲು ಸಲಹೆ

ಮಂಗಳೂರು/ಉಡುಪಿ: ಕೇರಳದಲ್ಲಿ ನೇಗೇರಿಯಾ ಫೌಲೇರಿ ಯಿಂದ ಉಂಟಾಗುವ ಅಮೀಬಿಕ್ ನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆಗೆ ಹೊರಡುವ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷತಾ ಕ್ರಮಗಳನ್ನು ಪಾಲಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸಲಹೆಗಳನ್ನು ನೀಡಿದೆ.

ಮಂಗಳೂರು: ಸುಖಾನಂದ ಶೆಟ್ಟಿ ಕೊಲೆ ಆರೋಪಿಗೆ ಆಶ್ರಯ ; 19 ವರ್ಷಗಳ ಬಳಿಕ ಆರೋಪಿ ಬಂಧನ – vishwanews24

ನೇಗೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ನಿಂತ ನೀರು, ಕೊಳ, ಈಜು ಕೊಳಗಳು ಹಾಗೂ ಕೆರೆಗಳು. ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ. ನೇಗೇರಿಯಾ ಫೌಲೇರಿ ಅತ್ಯಂತ ವಿಷಕಾರಿ ಸೂಕ್ಷ್ಮಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ ಮೆನಿಂಗೊ ಎನ್ಸೆಫಲೈಟಿಸ್ ಎನ್ನುವ ಅಪರೂಪದ ಗಂಭೀರ ಮತ್ತು ಮಾರಣಾಂತಿಕ ಕಾಯಿಲೆಯನ್ನು ಉಂಟುಮಾಡುತ್ತದೆ.

ಆರೋಗ್ಯ ಇಲಾಖೆ ನೀಡಿದ 5 ಮಾರ್ಗಸೂಚಿಗಳೇನು?

  1. ನೇಗೇರಿಯಾ ಫೌಲೇರಿ (Naegleria fowleri) ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಉದಾಹರಣೆಗೆ ನಿಂತ ನೀರು, ಕೊಳ/ಈಜು ಕೊಳಗಳು ಹಾಗೂ ಕೆರೆ.
  2. ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ
  3. ನೆಗ್ರೇರಿಯಾ ಫೌಲೆರಿ ಅತ್ಯಂತ ವಿಷಕಾರಿ ಸೂಕ್ಷ್ಮಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್‌ ಎನ್ನುವ ಅಪರೂಪದ ಗಂಭೀರ/ಮಾರಣಾಂತಿಕ ಖಾಯಿಲೆಯನ್ನು ಉಂಟುಮಾಡುತ್ತದೆ.
  4. ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್‌ ಗಳನ್ನು ಬಳಸಿ ಅಥವಾ ನಿಮ್ಮ ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿದು ಮುನ್ನೆಚ್ಚರಿಕೆ ವಹಿಸಿ.
  5. ನೀರಿನ ಸಂಪರ್ಕದ ಏಳು ದಿನಗಳ ಒಳಗೆ ಜ್ವರ ತೀವು ತಲೆನೋವು, ವಾಕರಿಕೆ/ ವಾಂತಿ, ಕುತ್ತಿಗೆ ಬಿಗಿತ, ಗೊಂದಲ/ ಮಾನಸಿಕ ಸ್ಥಿತಿಗಳಲ್ಲಿ ಬದಲಾವಣೆಗಳು ಹಾಗೂ ವ್ಯಕ್ತಿಯ ವರ್ತನೆಯಲ್ಲಿ ಅಸ್ವಸ್ಥತೆ ಲಕ್ಷಣಗಳು ಕಾಣಿಸಿಕೊಂಡರೆ ನಿರ್ಲಕ್ಷ್ಯ ಮಾಡದೇ ತುರ್ತು ಆರೈಕೆಯನ್ನು ಪಡೆಯಲು ಹತ್ತಿರದ ಸರ್ಕಾರಿ ಆಸ್ಪತ್ರೆ/ ವೈದ್ಯರನ್ನು ಸಂಪರ್ಕಿಸಿ.

ಬಿ.ಸಿ.ರೋಡ್: ಮಾರುವೇಷದಲ್ಲಿ ಬಂದು ಪತಿಗೆ ಚೂರಿ ಇರಿತ: ಪತ್ನಿ ಪೊಲೀಸ್ ವಶಕ್ಕೆ – vishwanews24

Leave a Reply