ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು ಕಾನೂನು ಪಾಲನೆ ಮಾಡುತ್ತಾರೆ : ಹೈಕೋರ್ಟ್ ನ್ಯಾಯಮೂರ್ತಿ – vishwanews24
ಕಠಿಣ ಕಾನೂನು ಕ್ರಮ ಕೈಗೊಳ್ಳದ ಕಾರಣ ಅಪರಾಧವೆಸಗುವುದು ಸುಲಭವಾಗಿದೆ ..
ಬೆಂಗಳೂರು: ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು ಕಾನೂನು ಪಾಲನೆ ಮಾಡುತ್ತಾರೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ತಮಗೆ ಲಭ್ಯವಿರುವ ಹಕ್ಕುಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಮಧ್ಯಪ್ರಾಚ್ಯ ದೇಶಗಳ ರೀತಿಯಲ್ಲಿಯೇ ನಮ್ಮಲ್ಲೂ ಕೈ-ಕಾಲು ಕತ್ತರಿಸುವ ಶಿಕ್ಷೆ ವಿಧಿಸಿ ಜನರು ಕಾನೂನು ಪಾಲಿಸುತ್ತಾರೆ ಎಂದು ಅವರು ತಿಳಿಸಿದ್ದಾರೆ.
ನಾಳೆಯಿಂದ ರಾಜ್ಯದಲ್ಲಿ ಡಿಕೆಶಿ ದರ್ಬಾರ್ ; ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆಶಿ ರೋಚಕ ಪಯಣ – vishwanews24
ಅತ್ಯಾಚಾರ ಆರೋಪದಲ್ಲಿ ಬಂಧಿನಕ್ಕೊಳಗಾಗಿರುವ ತೆಲಂಗಾಣದ ಯುವಕನೊಬ್ಬ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ವೇಳೆ ಈ ಕುರಿತು ಮಾತನಾಡಿದ ಅವರು, “ನಾವು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದ ಕಾರಣ ಕಾನೂನು ತನ್ನ ಹಲ್ಲುಗಳನ್ನು ಕಳೆದುಕೊಂಡಿದೆ. ನಮ್ಮ ಪ್ರಜಾಪ್ರಭುತ್ವದಲ್ಲಿ ಅಪರಾಧ ಎಸಗುವುದು ಸುಲಭ ಎನ್ನುವಂತಾಗಿದೆ. ಮಧ್ಯಪ್ರಾಚ್ಯ ದೇಶಗಳಲ್ಲಿ ನೀಡುವ ಕಠಿಣ ಶಿಕ್ಷೆಯನ್ನು ನಮ್ಮಲ್ಲೂ ತಪ್ಪಿತಸ್ಥರಿಗೆ ನೀಡುವಂತಾದರೆ, ಜನರು ತಕ್ಕ ರೀತಿಯಲ್ಲಿ ಕಾನೂನು ಪಾಲಿಸುತ್ತಾರೆ” ಎಂದು ಹೇಳಿದ್ದಾರೆ.
