ಕೊಟ್ಟ ಮಾತು ಉಳಿಸಿಕೊಳ್ಳುವುದು ವಿಶ್ವದಲ್ಲಿ ದೊಡ್ಡ ಶಕ್ತಿ : ಡಿಕೆ ಶಿ – vishwanews24
ಕೊಟ್ಟ ಮಾತು ಉಳಿಸಿಕೊಳ್ಳುವುದು ವಿಶ್ವದಲ್ಲಿ ದೊಡ್ಡ ಶಕ್ತಿ : ಡಿಕೆ ಶಿ
ಬೆಂಗಳೂರು: ʻಕೊಟ್ಟ ಮಾತು ಉಳಿಸಿಕೊಳ್ಳುವುದು ವಿಶ್ವದಲ್ಲಿ ದೊಡ್ಡ ಶಕ್ತಿʼ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಪೋಸ್ಟ್ ಸಿಎಂ ಸಿದ್ದರಾಮಯ್ಯ ಅವರಿಗೆ ಪರೋಕ್ಷವಾಗಿ ಟಾಂಟ್ ಕೊಟ್ಟಂತಿದೆ.

ಇಂದು ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ, `Word Power Is World Power’ ಎಂದು ಪೋಸ್ಟ್ ಹಾಕಿದ್ದಾರೆ. ನಿನ್ನೆಯೂ ಡಿಸಿಎಂ ಡಿಕೆ ಶಿವಕುಮಾರ್ ಇದೇ ಮಾತನ್ನ ವೇದಿಕೆಯಲ್ಲಿ ಹೇಳಿದ್ದರು. ಮತ್ತೆ ಇದೇ ಪದವನ್ನು ಪೋಸ್ಟ್ ಮಾಡಿರುವುದು ನೇರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೇ ಹೇಳಿದಂತಿದೆ. ಒಮ್ಮೆ ಕೊಟ್ಟ ಮಾತನ್ನ ಉಳಿಸಿಕೊಳ್ಳುವುದು ಜಗತ್ತಿನ ಅತಿದೊಡ್ಡ ಶಕ್ತಿ. ನನ್ನನ್ನೂ ಸೇರಿದಂತೆ ಅದು ನ್ಯಾಯಾಧೀಶರಾಗಿರಲಿ, ರಾಷ್ಟ್ರಪತಿಯಾಗಿರಲಿ ಅಥವಾ ಬೇರೆ ಯಾರೇ ಆಗಿರಲಿ, ಎಲ್ಲರೂ ನುಡಿದಂತೆ ನಡೆಯಬೇಕು ಎಂದು ಮಾತಿನ ಚಾಟಿ ಬೀಸಿದ್ದಾರೆ.
ಉಡುಪಿ : ಶ್ರೀ ಕೃಷ್ಣ ಮಠದ ಕನಕನ ಕಿಂಡಿಗೆ ಸ್ವರ್ಣ ಕವಚ – vishwanews24
