ಕೊಡಗು : ಜಿಲ್ಲೆಯಲ್ಲಿ ಆ.24ರಿಂದ 27ರ ವರೆಗೆ ಬೆಳಿಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ನಿಷೇಧಾಜ್ಞೆ – Vishwanews24
ಕೊಡಗು : ಜಿಲ್ಲೆಯಲ್ಲಿ ಆ.24ರಿಂದ 27ರ ವರೆಗೆ ಬೆಳಿಗ್ಗೆ 6ರಿಂದ ಸಂಜೆ 6 ಗಂಟೆವರೆಗೆ
ನಿಷೇಧಾಜ್ಞೆ ..
ಕಾಂಗ್ರೆಸ್ ನ ‘ಮಡಿಕೇರಿ ಚಲೋ’ ಹಾಗೂ ಬಿಜೆಪಿಯ ‘ಜನಜಾಗೃತಿ ಸಮಾವೇಶ’ಗಳಿಗೆ
ಅನುಮತಿ ನಿರಾಕರಣೆ..
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆ.24ರ ಬೆಳಿಗ್ಗೆ 6 ಗಂಟೆಯಿಂದ 27ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸೋಮವಾರ ರಾತ್ರಿ ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ಪ್ರತಿಭಟನೆ, ಜಾಥಾ, ಮೆರವಣಿಗೆ, ಕಪ್ಪುಬಾವುಟ ಪ್ರದರ್ಶನ ನಿಷೇಧಿಸಲಾಗಿದೆ. ಐವರು ಮತ್ತು ಅದಕ್ಕಿಂತ ಹೆಚ್ಚಿನ ಜನರು ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗಿದೆ.
ಈ ಮೂಲಕ ಆ.26ರಂದು ಕಾಂಗ್ರೆಸ್ ಕರೆ ನೀಡಿದ್ದ ‘ಮಡಿಕೇರಿ ಚಲೋ’ ಹಾಗೂ ಬಿಜೆಪಿ ಆಯೋಜಿಸಿದ್ದ ‘ಜನಜಾಗೃತಿ ಸಮಾವೇಶ’ಗಳಿಗೆ ಅನುಮತಿ ನಿರಾಕರಿಸಲಾಗಿದೆ.
ಆಝಾನ್ ವಿಚಾರಗಳನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ಆಲಿಸಲು ಹೈಕೋರ್ಟ್ ನಕಾರ – Vishwanews24
