ಕೊಡೊದಾದ್ರೆ ಡಿಸಿಎಂ ಹುದ್ದೆ ಕೊಡಿ, : ಎಂಬಿ ಪಾಟೀಲ್ ಹೊಸ ಬಾಂಬ್ ; ಕಾಂಗ್ರೆಸ್ ನ ಹೈಕಮಾಂಡ್ ಗೆ ತಲೆನೋವು
ಬೆಂಗಳೂರು: ಮೊದಲ ಹಂತದಲ್ಲಿ ಸಚಿವ ಸ್ಥಾನ ಸಿಗದಿದ್ದರಿಂದ ಆಕ್ರೋಶಗೊಂಡಿರುವ ಮಾಜಿ ಸಚಿವ ಎಂಬಿ ಪಾಟೀಲ್ ಹೊಸದೊಂದು ಬಾಂಬ್ ಸಿಡಿಸಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಎಂಬಿ ಪಾಟೀಲ್ ಮನವೊಲಿಸಲು ಬೆಳಗ್ಗಿನಿಂದ ಕಸರತ್ತು ನಡೆಸಿದ್ದು ಯಾವುದೇ ಪ್ರಯೋಜನವಾಗಲಿಲ್ಲ. ಇದೀಗ ಎಂಬಿ ಪಾಟೀಲ್ ಅವರು ತಮ್ಮಗೆ ಕೊಟ್ಟರೆ ಉಪಮುಖ್ಯಮಂತ್ರಿ ಸ್ಥಾನ ನೀಡಿ ಇಲ್ಲದಿದ್ದರೆ ಬೇರೆ ಹುದ್ದೆ ಬೇಡ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನ ಅತೃಪ್ತ ಶಾಸಕರ ಜೊತೆ ಚರ್ಚೆ ನಡೆಸಿದ ಬಳಿಕ ಎಂಬಿ ಪಾಟೀಲ್ ಇದೀಗ ಹೈಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ತಮ್ಮ ಬಳಿ 20ಕ್ಕೂ ಹೆಚ್ಚು ಶಾಸಕರು ಸಂಪರ್ಕದಲ್ಲಿರುವುದಾಗಿ ಹೇಳಿರುವ ಎಂಬಿ ಪಾಟೀಲ್ ಇದೀಗ ತಮಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಪಟ್ಟು ಹಿಡಿದಿದ್ದು ಈ ವಿಚಾರ ಇದೀಗ ಕಾಂಗ್ರೆಸ್ ನ ಹೈಕಮಾಂಡ್ ಗೆ ತಲೆನೋವಾಗಿ ಪರಿಣಮಿಸಿದೆ.
