ಕೊರೊನಾ ನಾಲ್ಕನೇ ಅಲೆ ಭೀತಿ ಹಿನ್ನೆಲೆ : ಯಾವುದೇ ಕಾರಣಕ್ಕೂ ಶಾಲೆಗಳನ್ನು ಕ್ಲೋಸ್ ಮಾಡಲ್ಲ : ಶಿಕ್ಷಣ ಸಚಿವ – Vishwanews24
ಮೇ 16ರಿಂದ ಶಾಲೆಗಳು ಪ್ರಾರಂಭ..
ಮೇ 2ನೇ ವಾರ ಎಸ್ಎಸ್ಎಲ್ಸಿ ಫಲಿತಾಂಶ..
ಶಾಲೆಯಲ್ಲಿ ಧರ್ಮದ ಬುಕ್ ಓದಿ ಅಂತ ಹೇಳುವ ಹಾಗಿಲ್ಲ..
ಬೆಂಗಳೂರು: ಕೊರೊನಾ ನಾಲ್ಕನೇ ಅಲೆ ಭೀತಿ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಶಾಲೆಗಳನ್ನು ಕ್ಲೋಸ್ ಮಾಡಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗದಿಯಂತೆ ಮೇ 16ರಿಂದ ಶಾಲೆಗಳು ಪ್ರಾರಂಭ ಆಗುತ್ತವೆ. ಜೂನ್, ಜುಲೈನಲ್ಲಿ 4ನೇ ಅಲೆ ಎಂದು ಹೇಳುತ್ತಿದ್ದಾರೆ. ಈಗಾಗಲೇ ಸಿಎಂ ಕೂಡಾ ಸಭೆ ಮಾಡಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ನಮಗೆ ನೀಡುವ ನಿಯಮಗಳನ್ನು ನಾವು ಕಡ್ಡಾಯವಾಗಿ ಪಾಲನೆ ಮಾಡುತ್ತೇವೆ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಶಾಲೆಗಳು ಕ್ಲೋಸ್ ಮಾಡೊಲ್ಲ ಎಂದು ಸ್ಪಷ್ಟ ಪಡಿಸಿದರು.
ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ಹಲ್ಲೆ ; ಬಜ್ಪೆ ಇನ್ಸ್ಪೆಕ್ಟರ್ ಸೇರಿ ಮೂವರು ಸಿಬ್ಬಂದಿ ಅಮಾನತು – Vishwanews24
ಮೇ 2ನೇ ವಾರ ಎಸ್ಎಸ್ಎಲ್ಸಿ ಫಲಿತಾಂಶ: ಪಿಯುಸಿ ಪರೀಕ್ಷೆಗಳು ಉತ್ತಮವಾಗಿ ನಡೆಯುತ್ತಿದೆ. ಉತ್ತಮ ಹಾಜರಾತಿ ಇದೆ. ಜೊತೆಗೆ ಎಸ್ಎಸ್ಎಲ್ಸಿ ಮೌಲ್ಯಮಾಪನ ಉತ್ತಮವಾಗಿ ನಡೆಯುತ್ತಿದೆ. ಹೀಗೆ ನಡೆದರೆ ಮೇ 2ನೇ ವಾರದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ನೀಡುತ್ತೇವೆ ಎಂದು ತಿಳಿಸಿದರು.
ಶಾಲೆಯಲ್ಲಿ ಧರ್ಮದ ಬುಕ್ ಓದಿ ಅಂತ ಹೇಳುವ ಹಾಗಿಲ್ಲ: ಕ್ಲಾರೆನ್ಸ್ ಶಾಲೆ ಬೈಬಲ್ ಕಡ್ಡಾಯ ನಿಯಮವು ಸರ್ಕಾರದ ನಿಯಮಕ್ಕೆ ವಿರೋಧವಾಗಿದೆ. ಈ ಶಾಲೆ ತಪ್ಪು ಮಾಡಿದೆ. ಶಿಕ್ಷಣ ಇಲಾಖೆ ಮೂಲಕ ನೋಟಿಸ್ ನೀಡಲಾಗಿದೆ. ಡಿಡಿಪಿಐ, ಬಿಇಓ ಮೂಲಕ ನೋಟಿಸ್ ನೀಡಲಾಗಿದೆ. ಆ ಶಾಲೆ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಸೋಮವಾರ ಶಾಲೆಗೆ ನೋಟಿಸ್ ನೀಡಲಾಗಿದೆ. ಕೂಡಲೇ ಲೀಗಲ್ ಪ್ರೊಸೆಸ್ ಮಾಡುತ್ತೇವೆ. ಸಿಬಿಎಸ್ಇ ಬೋರ್ಡ್ಗೂ ಈ ಬಗ್ಗೆ ಬರೆಯುತ್ತೇವೆ. ಯಾವ ಶಾಲೆಯೂ ಕೂಡಾ ಧರ್ಮದ ಬುಕ್ ಓದಿ ಅಂತ ಹೇಳುವ ಹಾಗೆ ಇಲ್ಲ. ರಾಜ್ಯ ಸರ್ಕಾರ ಎನ್ಓಸಿ ನೀಡುತ್ತದೆ. ಶಿಕ್ಷಣ ಇಲಾಖೆ ನಿಯಮದ ಅಡಿಯಲ್ಲಿ ಶಾಲೆ ಕೆಲಸ ನಿರ್ವಹಣೆ ಮಾಡಬೇಕು ಎಂದು ಹೇಳಿದರು.
