ಕೋಟ ಶ್ರೀನಿವಾಸ ಪೂಜಾರಿ ಓರ್ವ ಆದರ್ಶ ಮತ್ತು ಪ್ರಾಮಾಣಿಕ ರಾಜಕಾರಣಿ : ಮಾಜಿ ಪ್ರಧಾನಿ ದೇವೇಗೌಡ – Vishwanews24

Featured, ರಾಜ್ಯ ನ್ಯೂಸ್

ಕೋಟ ಶ್ರೀನಿವಾಸ ಪೂಜಾರಿ ಓರ್ವ ಆದರ್ಶ ಮತ್ತು ಪ್ರಾಮಾಣಿಕ ರಾಜಕಾರಣಿ : ಮಾಜಿ ಪ್ರಧಾನಿ ದೇವೇಗೌಡ

ಮೂಡಿಗೆರೆ : ಕೋಟ ಶ್ರೀನಿವಾಸ ಪೂಜಾರಿ ಓರ್ವ ಆದರ್ಶ ಮತ್ತು ಪ್ರಾಮಾಣಿಕ ರಾಜಕಾರಣಿ. ಹೀಗಾಗಿ ಅವರನ್ನು ಬಹುದೊಡ್ಡ ಅಂತರದಿಂದ ಗೆಲ್ಲಿಸಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಮನವಿ ಮಾಡಿದ್ದಾರೆ.

ಮೂಡಿಗೆರೆಯಲ್ಲಿ ನಡೆದ ಬಿಜೆಪಿ – ಜೆಡಿಎಸ್ ಕಾರ್ಯಕರ್ತರ ಜಂಟಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ದೇವೇಗೌಡರು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಅತ್ಯಂತ ಪ್ರಾಮಾಣಿಕ ರಾಜಕಾರಣಿ. ಕೋಟರವರನ್ನು ಕನಿಷ್ಠ 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ ವರ ಆಯ್ಕೆ ನಮಗೆ ನಿಜಕ್ಕೂ ಸಂತಸ ತಂದಿದೆ. ಓರ್ವ ಪ್ರಾಮಾಣಿಕ ನಾಯಕನನ್ನು ಗೆಲ್ಲಿಸಿ ಸಂಸತ್ತಿಗೆ ಕಳುಹಿಸಲು ಸಂತೋಷವಾಗುತ್ತಿದೆ ಎಂದು ದೇವೇಗೌಡರು ಅಭಿಪ್ರಾಯ ಪಟ್ಟರು.

ಕಳೆದ 10 ವರ್ಷಗಳಲ್ಲಿ ಪರಿಸ್ಥಿತಿ ಬದಲಾಗಿದೆ ; ಹಬ್ಬಗಳನ್ನು ಪೊಲೀಸ್ ಬಂದೋಬಸ್ತ್‌ನಲ್ಲಿ ಆಚರಿಸಬೇಕಿದೆ : ಪ್ರಿಯಾಂಕ್ ಖರ್ಗೆ – Vishwanews24

ದೇಶವಾಸಿಗಳು ನೆಮ್ಮದಿಯಿಂದ ಇರಬೇಕು ಎನ್ನುವ ನನ್ನ ಆಸೆಗೆ ಪ್ರಾಮಾಣಿಕ ನಾಯಕನನ್ನು ಆರಿಸಿ ಮೋದಿಯವರಿಗೆ ಉಡುಗೊರೆ ನೀಡುವುದು ಸಂತಸ ತಂದಿದೆ. ಪ್ರಧಾನಮಂತ್ರಿ ಆಗಲು ಸಾಮರ್ಥ್ಯ ಇರುವ ವ್ಯಕ್ತಿ ನರೇಂದ್ರ ಮೋದಿ ಬಿಟ್ಟರೆ ಬೇರೆ ಯಾವುದೇ ವ್ಯಕ್ತಿ ಭಾರತದಲ್ಲಿಲ್ಲ. ಆ ಹಿನ್ನೆಲೆಯಲ್ಲಿ ಯಾವುದೇ ಷರತ್ತಿಲ್ಲದೆ ನಾನು ಮೋದಿಯವರನ್ನು ಬೆಂಬಲಿಸಿದೆ ” ಎಂದು ದೇವೇಗೌಡರು ಚುನಾವಣಾ ಸಭೆಯಲ್ಲಿ ಹೇಳಿದ್ದಾರೆ.

Leave a Reply