ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ – ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ ; ಯುವಕ ವಶಕ್ಕೆ – vishwanews24

Featured, ಉಡುಪಿ

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ – ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ ; ಯುವಕ ವಶಕ್ಕೆ

ಕೋಟ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಮಧ್ಯೆಯೇ ಯುವಕನೊಬ್ಬ ವಿಚಿತ್ರವಾಗಿ ವರ್ತಿಸಿ ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಹೆದ್ದಾರಿಯ ಮಧ್ಯೆ ಟೇಬಲ್‌ ಇಟ್ಟು, ಟಿವಿ ಹಾಗೂ ಧ್ವನಿವರ್ಧಕ ಅಳವಡಿಸಿ ಮ್ಯೂಸಿಕ್ ವ್ಯವಸ್ಥೆ ಮಾಡಿ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ್ದರಿಂದ ಕೆಲಕಾಲ ಸಂಚಾರದಲ್ಲಿ ಗೊಂದಲ ಉಂಟಾಯಿತು.

ಕೋಟತಟ್ಟು ಸಮೀಪದ ಬೆಲ್ಲದ ಗಣಪತಿ ದೇವಸ್ಥಾನ ಸಮೀಪದ ನಿವಾಸಿ ರಂಜಿತ್‌ ಸೋಮಯಾಜಿ (25) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಹೆದ್ದಾರಿಯಲ್ಲೇ ಯುವಕ ವಿಚಿತ್ರವಾಗಿ ವರ್ತಿಸುವುದನ್ನು ಕಂಡ ವಾಹನ ಸವಾರರು ಮತ್ತು ಸ್ಥಳೀಯರು ಆತಂಕಗೊಂಡಿದ್ದು ಕೋಟ ಪೊಲೀಸರಿಗೆ ಮಾಹಿತಿ ನೀಡಿದ್ದು ಅವರು ಸ್ಥಳಕ್ಕೆ ಧಾವಿಸಿದರು. ಈ ವೇಳೆ ಪೊಲೀಸರ ಮೇಲೆಯೇ ರಂಜಿತ್ ಕತ್ತಿ ಬೀಸಿ ಹಲ್ಲೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಬಳಿಕ ಪೊಲೀಸರು ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದರು.

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ – vishwanews24

ಪ್ರಾಥಮಿಕ ವಿಚಾರಣೆಯಲ್ಲಿ ಆತ ಮಾನಸಿಕ ಅಸ್ವಸ್ಥನಾಗಿರಬಹುದೆಂಬ ಅನುಮಾನ ವ್ಯಕ್ತವಾಗಿದ್ದರೂ ಕೂಡ ಮಾನಸಿಕ ಚಿಕಿತ್ಸೆಗೆ ಸಂಬಂಧಿಸಿದ ಯಾವುದೇ ಅಧಿಕೃತ ದಾಖಲೆಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

Leave a Reply