ಕೋಮುವಾದಿ ಬಿಜೆಪಿಯನ್ನು ದೂರ ಇಡುವುದಕ್ಕಾಗಿ ಜಾತ್ಯತೀತ ಪಕ್ಷವಾದ ಕಾಂಗ್ರೆಸ್ ಬೆಂಬಲಿಸಲು ಜೆಡಿಎಸ್ನವರು ಮುಂದಾಗಬೇಕು : ಸಿದ್ದರಾಮಯ್ಯ – Vishwnaews24
ಬಿಜೆಪಿ ಹಾಗೂ ಜೆಡಿಎಸ್ನಿಂದ ಕಾಂಗ್ರೆಸ್ ಗೆ ಆತ್ಮಸಾಕ್ಷಿ ಮತಗಳು ದೊರೆಯಲಿವೆ ..
ಜೆಡಿಎಸ್ನವರು ನಮ್ಮ ಅಭ್ಯರ್ಥಿ ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ..
ಮೈಸೂರು: ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಎರಡನೇ ಅಭ್ಯರ್ಥಿ ಮನ್ಸೂರ್ ಆಲಿಖಾನ್ ಅವರಿಗೆ ಬಿಜೆಪಿ ಹಾಗೂ ಜೆಡಿಎಸ್ನಿಂದ ಆತ್ಮಸಾಕ್ಷಿ ಮತಗಳು ದೊರೆಯಲಿವೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ನಾವು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು ಜೆಡಿಎಸ್ನಲ್ಲಿರುವ ಅಲ್ಪಸಂಖ್ಯಾತ ಶಾಸಕರು ಬೆಂಬಲಿಸುವ ವಿಶ್ವಾಸವಿದೆ ಎಂದರು.

ಕೋಮುವಾದಿ ಬಿಜೆಪಿಯನ್ನು ದೂರ ಇಡುವುದಕ್ಕಾಗಿ ತಮ್ಮ ಅಭ್ಯರ್ಥಿಯನ್ನು ಕಣದಿಂದ ನಿವೃತ್ತಿಗೊಳಿಸಿ ಜಾತ್ಯತೀತ ಪಕ್ಷವಾದ ಕಾಂಗ್ರೆಸ್ ಬೆಂಬಲಿಸಲು ಜೆಡಿಎಸ್ನವರು ಮುಂದಾಗಬೇಕು. ಎಚ್.ಡಿ. ದೇವೇಗೌಡ ಅವರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾಗ ನಾವು ಅಭ್ಯರ್ಥಿಯನ್ನು ಹಾಕದೇ ಬೆಂಬಲ ನೀಡಿದ್ದೆವು. 37 ಸ್ಥಾನ ಗೆದ್ದಿದ್ದ ಜೆಡಿಎಸ್ಗೆ ನಾವು ಮುಖ್ಯಮಂತ್ರಿ ಸ್ಥಾನ ನೀಡಿದ್ದೆವು. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು ಎನ್ನುವುದು ನಮ್ಮ ಉದ್ದೇಶವಾಗಿತ್ತು. ಈಗ ಜೆಡಿಎಸ್ನವರು ರಾಜ್ಯಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗೆ ಬೆಂಬಲಿಸಲಿ ಎಂದರು.
ಕೋಮುವಾದಿ ಅಭ್ಯರ್ಥಿ ಗೆಲ್ಲದಿರಲೆಂದು ಜೆಡಿಎಸ್ನವರು ನಮ್ಮ ಅಭ್ಯರ್ಥಿ ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.
