ಕೋವಿಡ್ ಕಷ್ಟಕಾಲದಲ್ಲೂ ವೃತ್ತಿಪರತೆಯನ್ನು ಎತ್ತಿಹಿಡಿದ ಪತ್ರಕರ್ತರಿಗೆ ನನ್ನ ಕೋಟಿ ಕೋಟಿ ನಮನಗಳು: ಎಚ್ ಡಿ ಕುಮಾರಸ್ವಾಮಿ
ಕೋವಿಡ್ ಕಷ್ಟಕಾಲದಲ್ಲೂ ವೃತ್ತಿಪರತೆಯನ್ನು ಎತ್ತಿಹಿಡಿದ ಪತ್ರಕರ್ತರಿಗೆ ನನ್ನ ಕೋಟಿ ಕೋಟಿ ನಮನಗಳು: ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು: ಕೋವಿಡ್ – 19 ಮೊದಲನೇ ಹಾಗೂ ಎರಡನೇ ಅಲೆಯ ಸಂದರ್ಭದಲ್ಲಿಯೂ ” ಜನ ಮತ್ತು ಸಮಾಜದ ” ಹಿತಕ್ಕಾಗಿ ತಮ್ಮ ಜೀವದ ಹಂಗು ತೊರೆದು ಕರ್ತವ್ಯ ನಿರ್ವಾಹಿಸಿದ ಪತ್ರಕರ್ತರ ಕಾಳಜಿ ಮತ್ತು ಬದ್ದತೆಗೆ ಬೆಲೆಕಟ್ಟಲು ಸಾಲದು. ಪತ್ರಕರ್ತ ಮಿತ್ರರೆಲ್ಲರಿಗೂ ಪತ್ರಿಕಾ ದಿನಾಚರಣೆಯ ಶುಭಾಶಯಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶುಭ ಹಾರೈಸಿದ್ದಾರೆ. ಈ ಬಗ್ಗೆ ಟ್ವೀ ಟ್ ಮಾಡಿರುವ ಅವರು, ಕೋವಿಡ್ ಕಷ್ಟಕಾಲದಲ್ಲೂ ವೃತ್ತಿಪರತೆಯನ್ನು ಎತ್ತಿಹಿಡಿದ ಪತ್ರಕರ್ತರಿಗೆ ನನ್ನ ಕೋಟಿ ಕೋಟಿ ನಮನಗಳು. ಜನರಲ್ಲಿ ತಾವು ಮೂಡಿಸಿದ ಜಾಗೃತಿ, ಅರಿವಿನ ಪರಿಣಾಮ ರಾಜ್ಯದಲ್ಲಿ ಇಂದು ಕೊವಿಡ್ ಸೋಂಕು ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದ್ದು ಕರ್ನಾಟಕ ” ಕೊರೊನಾ ಮುಕ್ತ ” ದತ್ತ ದಾಪುಗಾಲುಟ್ಟಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪತ್ರಕರ್ತ ಮಿತ್ರರೆಲ್ಲರಿಗೂ ಪತ್ರಿಕಾ ದಿನಾಚರಣೆಯ ಶುಭಾಶಯಗಳು.ಕೋವಿಡ್ – 19 ಮೊದಲನೇ ಹಾಗೂ ಎರಡನೇ ಅಲೆಯ ಸಂದರ್ಭದಲ್ಲಿಯೂ ” ಜನ ಮತ್ತು ಸಮಾಜದ ” ಹಿತಕ್ಕಾಗಿ ತಮ್ಮ ಜೀವದ ಹಂಗು ತೊರೆದು
ಕರ್ತವ್ಯ ನಿರ್ವಾಹಿಸಿದ ನಿಮ್ಮ ಕಾಳಜಿ ಮತ್ತು ಬದ್ದತೆಗೆ ಬೆಲೆಕಟ್ಟಲು ಸಾಲದು. (1/3)— H D Kumaraswamy (@hd_kumaraswamy) July 1, 2021
