ಕೋವಿಶೀಲ್ಡ್ ಪಡೆದವರು ತಂಪುಪಾನಿಯ, ಐಸ್ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ : ಆರೋಗ್ಯ ಇಲಾಖೆ ಸ್ಪಷ್ಟನೆ – Vishwanews24
ಕೋವಿಶೀಲ್ಡ್ ಪಡೆದವರು ತಂಪುಪಾನಿಯ, ಐಸ್ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ : ಆರೋಗ್ಯ ಇಲಾಖೆ ಸ್ಪಷ್ಟನೆ
ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದವರು ಫ್ರಿಜ್ ನೀರು, ಐಸ್ ಕ್ರೀಮ್ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು ಎಂಬುವುದು ಸುಳ್ಳು ಸುದ್ದಿಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ರೀತಿಯ ಸುದ್ದಿ ಸುಳ್ಳಾಗಿದ್ದು, ಇಂತಹ ಯಾವುದೇ ಸುತ್ತೋಲೆ ಇಲಾಖೆ ಹೊರಡಿಸಿಲ್ಲ. ಗಾಬರಿ ಗೊಳ್ಳದಿರಿ, ತಪ್ಪು ಮಾಹಿತಿ ಬಗ್ಗೆ ಜಾಗೃತಿ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
Not true. No such circular has been issued from @DHFWKA. https://t.co/tNp8w5cQPn
— K'taka Health Dept (@DHFWKA) May 3, 2024
ಸುಳ್ಳು ಸುದ್ದಿ
ಆರೋಗ್ಯ ಇಲಾಖೆಯು ತಿಳಿಸಿರುವ ಮಾಹಿತಿಯ ಪ್ರಕಾರ, ಎಲ್ಲ ವಿದ್ಯಾರ್ಥಿಗಳು ಹಾಗೂ ಪೋಷಕರು ಯಾವುದೇ ರೀತಿಯ ಫ್ರಿಜ್ ನೀರು, ಐಸ್ ಕ್ರೀಮ್ ಮತ್ತಯ ತಂಪು ಪಾನೀಯಗಳನ್ನು ಕುಡಿಯಬಾರದು. ಏಕೆಂದರೆ ಕೊರೊನಾ ಸಂದರ್ಭದಲ್ಲಿ ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು ದಿಢೀರ್ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುತ್ತಿದೆ. ಹೀಗಾಗಿ ಮೇಲೆ ತಿಳಿಸಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವುದು ಎಂದು ಖಾಸಗಿ ಕಾಲೇಜು ಸುತ್ತೋಲೆ ಹೊರಡಿಸಿತ್ತು.
ನಾಟಕ ಪ್ರದರ್ಶನ ವೇಳೆ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಪಾತ್ರಧಾರಿ ಸಾವು – Vishwanews24
ಖಾಸಗಿ ಕಾಲೇಜೊಂದು ಈ ರೀತಿಯಾಗಿ ನೋಟಿಸ್ ಹೊರಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಶುಕ್ರವಾರ ಹರದಾಡಲು ಆರಂಭಿಸಿತು. ಇದರಿಂದ ಎಚ್ಚತ್ತ ಆರೋಗ್ಯ ಇಲಾಖೆ ಇದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದೆ.
