ಕೌಟುಂಬಿಕ ಕಲಹ : ದಂಪತಿ ಸೂಸೈಡ್  ;  ಅದೃಷ್ಟವಶಾತ್ ಮಗು ಪಾರು – vishwanews24

Featured, ರಾಜ್ಯ ನ್ಯೂಸ್

ಕೌಟುಂಬಿಕ ಕಲಹ : ದಂಪತಿ ಸೂಸೈಡ್  ;  ಅದೃಷ್ಟವಶಾತ್ ಮಗು ಪಾರು

ಮಂಡ್ಯ: ಕೌಟುಂಬಿಕ ಕಲಹಕ್ಕೆ 2ರ ಮಗುವನ್ನು ಕತ್ತು ಹಿಸುಕಿ, ಬಳಿಕ ದಂಪತಿ ನೇಣು ಶರಣಾಗಿದ್ದಾರೆ. ಆದರೆ ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಪಾರಾಗಿರುವ ಹೃದಯ ವಿದ್ರಾವಕ ಘಟನೆ ಮಂಡ್ಯದ ಕೆ.ಆರ್.ಪೇಟೆ  ಪಟ್ಟಣದಲ್ಲಿ ನಡೆದಿದೆ.

ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ನೇಣಿಗೆ ಶರಣಾದ ದಂಪತಿ. ತಮ್ಮ ಎರಡು ವರ್ಷದ ಮಗುವನ್ನು ಕತ್ತು ಹಿಸುಕಿ, ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: 

ಇರಾನ್-ಇಸ್ರೇಲ್ ಸಂಘರ್ಷ: ಅರಬ್ ರಾಷ್ಟ್ರಗಳಿಗೆ ತೆರಳಬೇಕಿದ್ದ, ಮತ್ತು ಅಲ್ಲಿಂದ ಆಗಮಿಸಬೇಕಿದ್ದ 21 ವಿಮಾನಗಳು ರದ್ದು – vishwanews24

ಮೃತ ದಂಪತಿ ಕಳೆದ ಮೂರು ವರ್ಷದ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಎರಡು ವರ್ಷದ ಮಗುವಿತ್ತು. ಕೆ.ಆರ್.ಪೇಟೆಯ ಜಯನಗರ ಬಡಾವಣೆ ಮನೆಯೊಂದರಲ್ಲಿ ದಂಪತಿ ಬಾಡಿಗೆಗೆ ಇದ್ದರು. ಇಂದು (ಮಾ.9) ಬೆಳಿಗ್ಗೆ ಕೌಟುಂಬಿಕ ಕಲಹದಿಂದಾಗಿ ತಮ್ಮ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಈ ವೇಳೆ ಮಗು ಅಸ್ವಸ್ಥಗೊಂಡಿದೆ. ಬಳಿಕ ದಂಪತಿ ನೇಣಿಗೆ ಶರಣಾಗಿದ್ದಾರೆ.

ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಬದುಕುಳಿದಿದೆ. ಈವರೆಗೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೆ.ಆರ್.ಪೇಟೆ ಟೌನ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: 

ಇರಾನ್‌-ಇಸ್ರೇಲ್‌ ಯುದ್ಧ : ಬೆಂಗಳೂರಿಗೆ ಆಗಮಿಸಬೇಕಿದ್ದ 9, ನಿರ್ಗಮಿಸಬೇಕಿದ್ದ 10 ವಿಮಾನಗಳು ರದ್ದು – vishwanews24

Leave a Reply