ಕ್ರಿಸ್ಮಸ್ ಹಬ್ಬ :ಕ್ರೈಸ್ತ ಬಾಂಧವರಿಗೆ ಶುಭಾಶಯ ಕೋರಿದ ಸಿಎಂ ಯಡಿಯೂರಪ್ಪ -Vishwanews24

Featured, ರಾಜ್ಯ ನ್ಯೂಸ್

ಕ್ರಿಸ್ಮಸ್ ಹಬ್ಬ :ಕ್ರೈಸ್ತ ಬಾಂಧವರಿಗೆ ಶುಭಾಶಯ ಕೋರಿದ ಸಿಎಂ ಯಡಿಯೂರಪ್ಪ -Vishwanews24

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಾಡಿನ ಸಮಸ್ತ ಜನತೆಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಎಲ್ಲ ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಹಾರ್ದಿಕ ಶುಭಾಶಯಗಳು. ಕೊರೋನಾ ಪರಿಸ್ಥಿತಿ ಹಿನ್ನಲೆಯಲ್ಲಿ ಈ ಬಾರಿ ಸೀಮಿತ ಆಚರಣೆಗಳಿರಲಿ, ಮಾಸ್ಕ್ ಧರಿಸಿ, ಭೌತಿಕ ಅಂತರ ಕಡ್ಡಾಯ ಪಾಲಿಸಿ. ಆದಷ್ಟೂ ಮನೆಗಳಲ್ಲಿಯೇ ದೇವರನ್ನು ಆರಾಧಿಸಿ. ನಾಡಿನಲ್ಲಿ ಆರೋಗ್ಯ, ಶಾಂತಿ, ಸಮೃದ್ಧಿಗಳು ನೆಲೆಸಲಿ ಎಂದು ವಿಶೇಷವಾಗಿ ಪ್ರಾರ್ಥಿಸೋಣ ಎಂದು ಹೇಳಿದ್ದಾರೆ.