ಗಾಂಧಿ ಕುಟುಂಬವನ್ನ ಹೊರತುಪಡಿಸಿ ಬೇರೆ ಯಾರಾದರೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಲಿ : ಪ್ರಿಯಾಂಕ ಗಾಂಧಿ -Vishwanews24
ಹೊಸದಿಲ್ಲಿ: ಗಾಂಧಿ ಕುಟುಂಬವನ್ನ ಹೊರತುಪಡಿಸಿ ಬೇರೆ ಯಾರಾದರೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಲೇ ಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಹೇಳಿದ್ದಾರೆ.
ರಾಹುಲ್ ಗಾಂಧಿ ಎಐಸಿಸಿಗೆ ಗಾಂಧಿ ಕುಟುಂಬಕ್ಕೆ ಸೇರಿಲ್ಲದ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕು ಎನ್ನುವ ಅಭಿಪ್ರಾಯ ಪಟ್ಟಿದ್ದರು. ಇದಕ್ಕೆ ಪ್ರಿಯಾಂಕಾ ಗಾಂಧಿ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದ್ದಾರೆ.
ನಮ್ಮ ಕುಟುಂಬ ಯಾರೊಬ್ಬರೂ ಕಾಂಗ್ರೆಸ್ ಪಕ್ಷಕ್ಕೆ ಅಧ್ಯಕ್ಷರಾಗುವುದಿಲ್ಲ ಎಂದು ರಾಹುಲ್ ಗಾಂಧಿ ಈಗಾಗಲೇ ಹೇಳಿದ್ದಾರೆ. ಅದಕ್ಕೆ ನನ್ನ ಸಂಪೂರ್ಣ ಸಹಮತವಿದೆ.
ಗಾಂಧಿ ಕುಟುಂಬಕ್ಕೆ ಸೇರಿಲ್ಲದ ವ್ಯಕ್ತಿಯನ್ನು ನಾವು ನಮ್ಮ ನಾಯಕ ಎಂದು ಒಪ್ಪಿಕೊಳ್ಳಲು ಸಿದ್ಧರಿದ್ದೇವೆ. ಒಂದು ವೇಳೆ ನಮ್ಮ ಪಕ್ಷದ ಅಧ್ಯಕ್ಷರಾಗುವವರು ‘ನೀನು ಉತ್ತರ ಪ್ರದೇಶದ ಜವಾಬ್ದಾರಿ ತೆಗೆದುಕೊಳ್ಳುವುದು ಬೇಡ, ಅಂಡಮಾನ್ ನಿಕೋಬಾರ್ಗೆ ಹೋಗು’ ಎಂದು ಹೇಳಿದರೂ ನಾನು ಅದನ್ನು ಸ್ವೀಕರಿಸಲು ಸಿದ್ಧಳಿದ್ದೇನೆ. ನಮ್ಮ ಪಕ್ಷದ ಅಧ್ಯಕ್ಷರು ಯಾರೇ ಆದರೂ ಅವರ ಆದೇಶವನ್ನು ನಾನು ಖಂಡಿತ ಪಾಲಿಸುತ್ತೇನೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ತಿಳಿಸಿದ್ದಾರೆ.
ಸಹೋದರ ರಾಹುಲ್ ಗಾಂಧಿ ಹೇಳುವಂತೆ ಗಾಂಧಿಯೇತರ ವ್ಯಕ್ತಿ ಅಧ್ಯಕ್ಷಗಿರಿಗೆ ಏರಬೇಕು ಎಂದು ಪ್ರಿಯಾಂಕ ಗಾಂಧಿ ಹೇಳಿದ್ದಾರೆ. ನಮ್ಮಲ್ಲಿ ಯಾರು ಕೂಡ ಪಕ್ಷದ ಅಧ್ಯಕ್ಷರಾಗುವುದು ಬೇಡ ಎಂದು ಈ ಹಿಂದೆ ರಾಹುಲ್ ಗಾಂಧಿ ಹೇಳಿದ್ದರು ಎನ್ನುವುದನ್ನ ಸ್ಮರಿಸಿದ ಪ್ರಿಯಾಂಕ, ನಾನು ಅವರ(ರಾಹುಲ್) ಮಾತಿಗೆ ಸಹಮತ ವ್ಯಕ್ತಪಡಿಸುತ್ತೇನೆ. ಯಾಕೆಂದರೆ ಪಕ್ಷವು ತನ್ನದೆ ಹಾದಿಯನ್ನ ಈಗ ಕಂಡುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ನಾನು ಭಾವಿಸುತ್ತಿರುವುದಾಗಿ ಪ್ರಿಯಾಂಕ ಹೇಳಿದ್ದಾರೆ.
ಇನ್ನು ಯಾರೇ ಪಕ್ಷದ ಅಧ್ಯಕ್ಷರಾದರು ನಾನು ಅವರ ಮಾತನ್ನ ಚಾಚು ತಪ್ಪದೆ ಪಾಲಿಸುತ್ತೇನೆ. ಉತ್ತರ ಪ್ರದೇಶವಲ್ಲ, ಅಂಡಮಾನ್ ಮತ್ತು ನಿಕೋಬಾರ್ನಲ್ಲಿ ಕೆಲಸ ಮಾಡಲು ಪಕ್ಷ ಸೂಚಿಸಿದರೆ ಅದನ್ನು ಸರಿಯಾಗಿ ನಿರ್ವಹಿಸುತ್ತೇನೆ ಎಂದು ತಿಳಿಸಿದ್ದಾರೆ.
