ಗೃಹ ಲಕ್ಷ್ಮಿ ಯೋಜನೆ – ಫಲಾನುಭವಿಗಳಲ್ಲಿ ಅನೇಕರಿಗೆ ಇನ್ನೂ ಹಣ ಜಮೆಯಾಗಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್  ಸ್ಪಷ್ಟನೆ – Vishwanews24

Featured, ರಾಜ್ಯ ನ್ಯೂಸ್

ಗೃಹ ಲಕ್ಷ್ಮಿ ಯೋಜನೆ – ಫಲಾನುಭವಿಗಳಲ್ಲಿ ಅನೇಕರಿಗೆ ಇನ್ನೂ ಹಣ ಜಮೆಯಾಗಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್  ಸ್ಪಷ್ಟನೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ‘ಗೃಹ ಲಕ್ಷ್ಮಿ’ ಯೋಜನೆಯ 2,000ರೂಪಾಯಿಗಳ ಆರ್ಥಿಕ ನೆರವು ಫಲಾನುಭವಿಗಳಲ್ಲಿ ಅನೇಕರಿಗೆ ಇನ್ನೂ ಹಣ ಜಮೆಯಾಗಿಲ್ಲ. ಇದುವರೆಗೂ 9‌.44ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಗೃಹಲಕ್ಷ್ಮೀ ಯೋಜನೆಯ ಹಣ ಜಮೆ‌ಯಾಗಿಲ್ಲ. ಈ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಧ್ಯಮ ಪ್ರಕಟಣೆ ಹೊರಡಿಸಿ ಸ್ಪಷ್ಟನೆ ನೀಡಿದ್ದಾರೆ.

ಆಗಸ್ಟ್ ತಿಂಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ 1.08 ಕೋಟಿ ಅರ್ಜಿ ಸಲ್ಲಿಕೆಯಾಗಿತ್ತು. 1.08 ಕೋಟಿ ಅರ್ಜಿದಾರರಿಗೆ 2,169 ಕೋಟಿ ಹಣ ಬಿಡುಗಡೆ ಮಾಡಲಾಗಿತ್ತು. 1.8 ಕೋಟಿ ಅರ್ಜಿದಾರರಲ್ಲಿ 93 ಲಕ್ಷ ಫಲಾನುಭವಿಗಳಿಗೆ ಹಣ ಜಮೆ ಆಗಿದೆ.

5.5 ಲಕ್ಷ ಅರ್ಜಿದಾರರಿಗೆ ಡಿಬಿಟಿ ಮೂಲಕ‌ ಹಣ ವರ್ಗಾವಣೆ ಚಾಲ್ತಿಯಲ್ಲಿದೆ. ಆದರೆ ಈವರೆಗೆ 9‌.44 ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಹಣ ಜಮೆ‌ಯಾಗಿಲ್ಲ ಎಂದು ಸಚಿವೆ ಮಾಹಿತಿ ನೀಡಿದ್ದಾರೆ.

ಉಡುಪಿ: ಬಿಜೆಪಿಯಲ್ಲಿ ನನಗೆ ಅಧಿಕಾರ ಕೊಡಲಿ , ಕೊಡದೇ ಇರಲಿ ನಾನು ಕೊನೆಯ ಉಸಿರಿನವರೆಗೂ ಬಿಜೆಪಿಯಲ್ಲಿಯೇ ಇರುತ್ತೇನೆ : ಪ್ರಮೋದ್ ಮಧ್ವರಾಜ್ – Vishwanews24

ಹಣ ಜಮೆಯಾಗಿಲ್ಲ ಏಕೆ?

3,082 ಅರ್ಜಿದಾರರು ಮರಣ ಹೊಂದಿದ್ದು ಅವರನ್ನು ಅನರ್ಹಗೊಳಿಸಲಾಗಿದೆ. 1 ಲಕ್ಷದ 59 ಸಾವಿರ ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. 5 ಲಕ್ಷ 96 ಸಾವಿರ ಅರ್ಜಿದಾರರ ಬ್ಯಾಂಕ್ ಆಧಾರ್ ಜೋಡಣೆಯಾಗಿಲ್ಲ. 1 ಲಕ್ಷದ 75 ಸಾವಿರ ಅರ್ಜಿದಾರರ ಹೆಸರು ಮತ್ತು ವಿಳಾಸದಲ್ಲಿ ವ್ಯತ್ಯಾಸ ಇದೆ. 9,766 ಅರ್ಜಿ ಸೇವಾಸಿಂಧು ವತಿಯಿಂದ ಪುನರ್ ಪರಿಶೀಲನೆ ನಡೆಯುತ್ತಿದೆ.

ಇನ್ನು ಸೆಪ್ಟೆಂಬರ್​ನಲ್ಲಿ 1 ಕೋಟಿ 14ಲಕ್ಷ ಜನ ಗೃಹಲಕ್ಷ್ಮಿ ‌ಫಲಾನುಭವಿಗಳಿದ್ದಾರೆ. ಸೆಪ್ಟೆಂಬರ್​​ನಲ್ಲಿ ಗೃಹಲಕ್ಷ್ಮಿ ಯೋಜನೆಗಾಗಿ 2,280 ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದ ನಟಿ ಪ್ರೇಮಾ – Vishwanews24

Leave a Reply