ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆಗೆ ಆಗ್ರಹಿಸಿ ನಲಪಾಡ್ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ 

Featured, ರಾಜ್ಯ ನ್ಯೂಸ್

ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆಗೆ ಆಗ್ರಹಿಸಿ ನಲಪಾಡ್ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ 

ಬೆಂಗಳೂರು : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ಖಂಡನಾರ್ಹ ಚಂದ್ರು ಕೊಲೆ ಸಂಬಂಧ ಕೋಮು ಸೌಹಾರ್ದ ಕದಡುವ ಹೇಳಿಕೆ ನೀಡಿದ್ದಾರೆಂದು ಪ್ರತಿಭಟನಾಕಾರರ ಆಕ್ರೋಶ ವ್ಯಕ್ತಪಡಿಸಿದರು.

ಆರಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ ಪ್ರತಿಭಟನಾಕಾರರು, ಬಳಿಕ ಕಾಂಗ್ರೆಸ್ ಭವನದಿಂದ ಪ್ರತಿಭಟನಾ ರ್ಯಾಲಿ ನಡೆಸಲು ಮುಂದಾದ ಕಾರ್ಯಕರ್ತರನ್ನು ಕಾಂಗ್ರೆಸ್ ಭವನದ ಗೇಟ್ ಬಂದ್ ಮಾಡಿ ಪೋಲಿಸರು ತಡೆದರು. ಆಗ ಪೋಲಿಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.

ಕಲಬುರ್ಗಿ:  ಮುಸ್ಲೀಮರು ಕೆತ್ತಿದ ವಿಗ್ರಹ ಪೂಜೆಗೆ ಯೋಗ್ಯವಲ್ಲ:  ಆಂದೋಲ ಸಿದ್ಧಲಿಂಗ ಸ್ವಾಮೀಜಿ – VIshwanews24

Leave a Reply