ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಂದ ಕಾಪು ಪೊಲೀಸ್ ವಸತಿ ಗೃಹದ ಉದ್ಘಾಟನೆ-vishwanews24

Featured, ಅಂತಾರಾಷ್ಟ್ರೀಯ ನ್ಯೂಸ್

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಂದ ಕಾಪು ಪೊಲೀಸ್ ವಸತಿ ಗೃಹದ ಉದ್ಘಾಟನೆ

ಕಾಪು: ಉಡುಪಿ ಜಿಲ್ಲಾ ಪೊಲೀಸ್, ಕಾಪು ಪೊಲೀಸ್ ವಸತಿ ಗೃಹದ ನೂತನ ಕಟ್ಟಡದ ಉದ್ಘಾಟನೆಯನ್ನು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಶನಿವಾರ ನೆರವೇರಿಸಿದರು.

ಕಾಪು ಪೊಲೀಸ್ ಠಾಣೆ ಪಕ್ಕದಲ್ಲೆ ಪೊಲೀಸರ ಅನುಕೂಲಕ್ಕೆ ಈ ವಸತಿ ಗೃಹ ನಿರ್ಮಾಣವಾಗಿದ್ದು, 2018ರಲ್ಲಿ ಕಾಮಗಾರಿಗೆ ಚಾಲನೆ ಸಿಕ್ಕಿದ್ದು, ರಾಜ್ಯ ಪೊಲೀಸ್ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ವತಿಯಿಂದ
ಸಮುಚ್ಚಯ ನಿರ್ಮಾಣಗೊಂಡಿದೆ.

ಕಾರ್ಯಕ್ರಮದಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ     ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ,ಸಂಸದೆ ಶೋಭಾ ಕರಂದ್ಲಾಜೆ, ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್, ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರೇ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್, ಕಾಪು ವೃತ್ತ ನೀರಿಕ್ಷಕ ಪ್ರಕಾಶ್, ಕಾಪು ಸಬ್ ಇನ್ಸ್‌ಪೆಕ್ಟರ್ ರಾಘವೇಂದ್ರ, ಕಾಪು ಪುರಸಭೆಯ ಅಧ್ಯಕ್ಷ ಅನಿಲ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ,ಕಾಪು ತಾಲೂಕು ಪಂಚಾಯತ್ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ,ಗುರ್ಮೆ ಸುರೇಶ್ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಇತರರು ಉಪಸ್ಥಿತರಿದ್ದರು.