ಗೃಹಲಕ್ಷ್ಮಿ ಯೋಜನೆ : 33ನೇ ಕಂತಿನ ಹಣ ಬಿಡುಗಡೆ – vishwanews24
ಗೃಹಲಕ್ಷ್ಮಿ ಯೋಜನೆ : 33ನೇ ಕಂತು ಬಿಡುಗಡೆ
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆ ನಡೆಯುತ್ತಿರುವ ನಡುವೆಯೇ ಮಹಿಳೆಯರಿಗೆ ಸರ್ಕಾರ ಗುಡ್ನ್ಯೂಸ್ ನೀಡಿದೆ. ಬಾಕಿ ಉಳಿದಿರುವ 33ನೇ ಕಂತಿನ ಹಣವನ್ನು ಇದೇ ತಿಂಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಅನರ್ಹ ಫಲಾನುಭವಿಗಳನ್ನು ಪತ್ತೆಹಚ್ಚಲು ಸರ್ಕಾರ ಮನೆ-ಮನೆ ಸರ್ವೆ ನಡೆಸಿ ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆ ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಪರಿಷ್ಕರಣೆ ನಡೆಯುವ ವೇಳೆ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡದಿರಲು ಈ ಹಿಂದೆ ಇಲಾಖೆ ನಿರ್ಧರಿಸಿತ್ತು. ಆದರೆ, ಇದೀಗ 33ನೇ ಕಂತಿನ ಹಣವನ್ನು ಇದೇ ತಿಂಗಳಲ್ಲಿ ಬಿಡುಗಡೆ ಮಾಡಲು ಸರ್ಕಾರ ತೀರ್ಮಾನಿಸಿದೆ. ನಿನ್ನೆ ಗ್ಯಾರಂಟಿ ಪ್ರಾಧಿಕಾರದ ಸದಸ್ಯರ ಜೊತೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಈ ಕುರಿತು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:
ಹೀಗಾಗಿ ಅನರ್ಹ ಪತ್ತೆಗಾಗಿ ಸರ್ವೆ ನಡೆಯುತ್ತಿದ್ದರೂ, ಅರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ 33ನೇ ಕಂತಿನ ಹಣ ಸಿಗಲಿದೆ. ಇಂದಿನಿಂದಲೇ ಮನೆ-ಮನೆ ಸರ್ವೆ ಕಾರ್ಯವೂ ಆರಂಭವಾಗಲಿದೆ
