ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲ್ಲ : ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ – vishwanews24
ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲ್ಲ : ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾವು ಯಾವುದೇ ಫಿಲ್ಟರ್ ಮಾಡುತ್ತಿಲ್ಲ. ಎಲ್ಲರಿಗೂ ಹಣ ಸಿಗುತ್ತದೆ. ಯಾವುದೇ ಗೊಂದಲ ಬೇಡ, ಐದು ವರ್ಷ ಮಾತಿನಂತೆ ನಡೆಯುತ್ತೇವೆ. ಗೃಹಲಕ್ಷ್ಮಿ ನಗದು ಹಾಕುವುದು ಸಲ್ಪ ವಿಳಂಬವಾಗಿತ್ತು, ಇದೀಗ ಎಲ್ಲಾ ಸರಿಯಾಗಿದೆ. ಈಗ ಎರಡು ತಿಂಗಳ ಕಂತು ಬಿಡುಗಡೆಯಾಗುತ್ತದೆ ಎಂದು ತಿಳಿಸಿದರು.
