ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ – vishwanews24

Featured, ರಾಜ್ಯ ನ್ಯೂಸ್

ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್

ಕಾರವಾರ: ಉತ್ತರ ಕನ್ನಡ  ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಕುಮಟಾ ತಾಲೂಕಿನ ಗೋಕರ್ಣದಲ್ಲಿ ಗುಡ್ಡ ಕುಸಿತವಾಗಿ ರಸ್ತೆ ಸಂಚಾರ ಬಂದ್ ಆಗಿದೆ.

ಸಾಣೆಕಟ್ಟ ತದಡಿ ಸಾಗುವ ಮಾರ್ಗದಲ್ಲಿ ರಸ್ತೆ ಮೇಲೆ ಧರೆ ಕುಸಿತವಾಗಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಗಳಾಗಿಲ್ಲ. ದೊಡ್ಡ ಪ್ರಮಾಣದಲ್ಲಿ ಮಣ್ಣು ರಸ್ತೆ ಮೇಲೆ ಕುಸಿತವಾಗಿದ್ದು, ಇದರಿಂದ ಈ ಭಾಗದ ಸಂಚಾರವೇ ಸಂಪೂರ್ಣ ಬಂದ್ ಆಗಿದೆ.

ಇದನ್ನೂ ಓದಿ:

ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ – vishwanews24

ಸ್ಥಳಕ್ಕೆ ಗೋಕರ್ಣ ಪೊಲೀಸರು ಹಾಗೂ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ನಿನ್ನೆಯಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಗಾಳಿ ಸಹಿತ ಅಬ್ಬರದ ಮಳೆ ಸುರಿಯುತ್ತಿದೆ. ಹೀಗಾಗಿ, ಈ ಅವಘಡ ಸಂಭವಿಸಿದೆ.

Leave a Reply