ಗೋಮಾಂಸ ತಿನ್ನಬೇಕು ಅನ್ನಿಸಿದರೆ ನಾನು ತಿನ್ನುತ್ತೇನೆ : ಸಿದ್ದರಾಮಯ್ಯ -Vishwanews24
ಅಲ್ಪ ಸಂಖ್ಯಾತರ ಹಕ್ಕುಗಳ ಬಗ್ಗೆ ಮಾತನಾಡಿದರೆ,ಸಂಘ ಪರಿವಾರದವರು ನೀನು ಮುಸ್ಲಿಂ ಸಮುದಾಯದಲ್ಲಿ ಹುಟ್ಟಿದ್ದಿಯಾ ಎಂದು ಕೇಳುತ್ತಾರೆ..
ಸಗಣಿ, ಗಂಜಲ ಎತ್ತದ, ಹಸು ಸಾಕದ, ಉಳುಮೆ ಮಾಡದವರು ಗೋ ಹತ್ಯೆ ಬಗ್ಗೆ ಮಾತನಾಡುತ್ತಾರೆ..
‘ಸಂಘ ಪರಿವಾರದವರು ಧರ್ಮ, ಮನುಷ್ಯರ ನಡುವೆ ಗೋಡೆ ಕಟ್ಟುವ ಕೆಲಸ ಮಾಡುತ್ತಿದ್ದಾರೆ..
ನಾವೆಲ್ಲರೂ ದೇಶ ಒಡೆಯುವವರ ಕೈಗೆ ಅಧಿಕಾರ ಸಿಗದಂತೆ ನೋಡಿಕೊಳ್ಳಬೇಕಿದೆ..
ತುಮಕೂರು: ‘ನಾನು ಇದುವರೆಗೂ ಗೋ ಮಾಂಸ ತಿಂದಿಲ್ಲ. ತಿನ್ನಬೇಕು ಅನ್ನಿಸಿದರೆ ತಿನ್ನುತ್ತೇನೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಅಲ್ಪ ಸಂಖ್ಯಾತರ ಹಕ್ಕುಗಳ ಬಗ್ಗೆ ಅಥವಾ ಅವರ ಪರವಾಗಿ ಮಾತನಾಡಿದರೆ, ಸಂಘ ಪರಿವಾರದವರು ನೀನು ಮುಸ್ಲಿಂ ಸಮುದಾಯದಲ್ಲಿ ಹುಟ್ಟಿದ್ದಿಯಾ ಎಂದು ಕೇಳುತ್ತಾರೆ. ಸಗಣಿ, ಗಂಜಲ ಎತ್ತದ, ಹಸು ಸಾಕದ, ಉಳುಮೆ ಮಾಡದವರು ಗೋ ಹತ್ಯೆ ಬಗ್ಗೆ ಮಾತನಾಡುತ್ತಾರೆ. ನಾವು ಅವರಿಂದ ಪಾಠ ಕಲಿಯಬೇಕಿಲ್ಲ ಎಂದು ಹೇಳಿದರು.
ನಮ್ಮ ಧರ್ಮದ ನಿಷ್ಠೆಯ ಜತೆಗೆ ಮನಗೆ ಇತರೆ ಧರ್ಮಗಳನ್ನು ಗೌರವಿಸುವ ಸಹಿಷ್ಣುತೆ ಇರಬೇಕು. ಬೇರೆ ಧರ್ಮದ ಬಗ್ಗೆ ದ್ವೇಷ, ಅಸೂಯೆ ಇದ್ದರೆ ನಾವು ಮನುಷ್ಯರಾಗಲು ಅರ್ಹರಲ್ಲ. ಹೀಗಾಗಿ ಮೊದಲು ನಾವು ಮಾನವರಾಗಬೇಕು, ನಮ್ಮ ದೇಶದಲ್ಲಿ ಎಲ್ಲಾ ಧರ್ಮಗಳ ಜನರ ನಡುವೆ ಸಹಬಾಳ್ವೆ ಅಗತ್ಯ ಇದನ್ನೇ ನಮ್ಮ ಸಂವಿಧಾನವೂ ಪ್ರತಿಪಾದಿಸುತ್ತದೆ ಎಂದು ತಿಳಿಸಿದರು.
ಉಡುಪಿ : ಮರಳು ದಿಬ್ಬಗಳ ತೆರವು ಹಾಗೂ ಸಾಗಾಣಿಕೆ ಸಂಪೂರ್ಣ ನಿಷೇಧ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ – Vishwnews24
‘ಸಂಘ ಪರಿವಾರದವರು ಧರ್ಮ, ಮನುಷ್ಯರ ನಡುವೆ ಗೋಡೆ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಸಮಾಜವನ್ನು ಜಾತಿ, ಧರ್ಮದ ಹೆಸರಲ್ಲಿ ಒಡೆಯುತ್ತಿದ್ದಾರೆ. ಅಂತಹವರ ಕೈಗೆ ಅಧಿಕಾರ ಕೊಟ್ಟರೆ ಸಮಾಜದಲ್ಲಿ ಮತ್ತಷ್ಟು ಒಡಕು ಮೂಡಲಿದೆ. ಆರ್ಎಸ್ಎಸ್ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತ್ರ ಹಿಂದೂನಾ? ನಾವು ಹಿಂದೂಗಳೇ. ಇತರೆ ಧರ್ಮಗಳ ಬಗ್ಗೆಯೂ ಗೌರವ ಇಟ್ಟುಕೊಂಡಿದ್ದೇವೆ‘ ಎಂದು ಹೇಳಿದರು.
ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಹಲವು ಭಾವನಾತ್ಮಕ ವಿಚಾರಗಳ ಮೂಲಕ ಸಮಾಜವನ್ನು ಒಡೆಯುವ, ಮನುಷ್ಯರ ನಡುವೆ ಗೋಡೆಕಟ್ಟುವ ಕೆಲಸವನ್ನು ಸಂಘ ಪರಿವಾರದ ಮುಖಂಡರು ಮಾಡುತ್ತಿದ್ದಾರೆ. ಸಂವಿಧಾನದ ಪರವಾಗಿರುವ ನಾವೆಲ್ಲರೂ ದೇಶ ಒಡೆಯುವವರ ಕೈಗೆ ಅಧಿಕಾರ ಸಿಗದಂತೆ ನೋಡಿಕೊಳ್ಳಬೇಕಿದೆ.
ರಾಜ್ಯದಲ್ಲಿ 2008ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ 1964 ರಿಂದಲೂ ಜಾರಿಯಲ್ಲಿದ್ದ ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಒಂದು ವರ್ಗವನ್ನು ಟಾರ್ಗೆಟ್ ಮಾಡಿದರು. ಈಗ ಮತಾಂತರ ನಿಷೇಧ ಕಾಯ್ದೆ ಮೂಲಕ ಮತ್ತಷ್ಟು ಕಿರುಕುಳ ನೀಡುತ್ತಿದೆ. ಹುಸಿ ಜಾತ್ಯತೀತತೆ ಪ್ರದರ್ಶಿಸುತ್ತಿರುವ ಜೆಡಿಎಸ್ ಈ ಎರಡು ಮಹತ್ವದ ಕಾಯ್ದೆಗಳ ಚರ್ಚೆಯ ವೇಳೆ ಸಭಾತ್ಯಾಗ ಮಾಡಿ, ಕಾಯ್ದೆ ಪಾಸಾಗುವಂತೆ ಮಾಡಿ, ಈಗ ನಾಟಕವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಳ್ತಂಗಡಿ : SDM ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ. ಬಿ. ಯಶೋವರ್ಮ ನಿಧನ – VIshwanews24
