ಗೋಹತ್ಯೆ ನಿಷೇಧ ಕಾಯ್ದೆ ರದ್ದು ವಿಚಾರ : ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ – Vishwanews24

Featured, ರಾಜ್ಯ ನ್ಯೂಸ್

ಗೋಹತ್ಯೆ ನಿಷೇಧ ಕಾಯ್ದೆ ರದ್ದು ವಿಚಾರ : ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಗೋಹತ್ಯೆ ನಿಷೇಧ ಕಾಯ್ದೆ ರದ್ದು ವಿಚಾರವನ್ನು ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಗೋಹತ್ಯೆ ನಿಷೇಧ ಕಾಯ್ದೆ ರದ್ದು, ಹಾಲಿಗೆ ಪ್ರೋತ್ಸಾಹಧನ ಕಡಿತ, ಉಚಿತ ವಿದ್ಯುತ್ ಗೆ ಷರತ್ತುಗಳ ಹೇರಿಕೆ ವಿರೋಧಿಸಿ ಮೈಸೂರಿನ ಜಿ.ಪಂ ಕಚೇರಿ ಮುಂಭಾಗ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

200 ಯೂನಿಟ್ ವಿದ್ಯುತ್  ಫ್ರೀ ಕೊಡಿ ಎನ್ನುವವರಿಗೆ ವಿವೇಕ ಇದೆಯಾ..? : ಸಿಎಂ ಸಿದ್ದರಾಮಯ್ಯ – Vishwanews24

ಬೆಳಗಾವಿಯಲ್ಲಿ ಸಂಜಯ್ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ.ವಿಜಯಪುರದಲ್ಲಿ ಸಿದ್ದೇಶ್ವರ ದೇವಸ್ಥಾನದ ಮುಂಭಾಗ, ಶಿವಮೊಗ್ಗದ ಅಶೋಕ ವೃತ್ತದಲ್ಲಿ, ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ, ಮಂಗಳೂರಿನ ಮಿನಿ ವಿಧಾನಸೌಧದ ಮುಂಭಾಗ, ಬಾಗಲಕೋಟೆಯಲ್ಲಿ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ

Leave a Reply