ಗೋಹತ್ಯೆ ನಿಷೇಧ ಮಸೂದೆ : ಬಿಜೆಪಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ :ಎಚ್.ಡಿ.ದೇವೇಗೌಡ -Vishwanews24

Featured, ರಾಜ್ಯ ನ್ಯೂಸ್

ಗೋಹತ್ಯೆ ನಿಷೇಧ ಮಸೂದೆ :ಜೆಡಿಎಸ್ ಸಂಪೂರ್ಣವಾಗಿ ವಿರೋಧಿಸುತ್ತದೆ .. 

ಗೋಹತ್ಯೆ ನಿಷೇಧ ಮಸೂದೆ : ಬಿಜೆಪಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ :ಎಚ್.ಡಿ.ದೇವೇಗೌಡ -Vishwanews24

ಬೆಂಗಳೂರು: ಬಿಜೆಪಿ ಸರ್ಕಾರ ಗೋಹತ್ಯೆ ಮಸೂದೆಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ ಎಂದು ಜೆಡಿಎಸ್ ಅಧ್ಯಕ್ಷ ಎಚ್ ಡಿ ದೇವೇಗೌಡ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, “ರಾಜ್ಯ ಸರ್ಕಾರದ ಜಾರಿಗೊಳಿಸಿರುವ ಗೋಹತ್ಯೆ ನಿಷೇಧಕ ವಿಧೇಯಕವನ್ನು ಜೆಡಿಎಸ್ ಸಂಪೂರ್ಣವಾಗಿ ವಿರೋಧಿಸುತ್ತದೆ. 2010ರಲ್ಲಿ ಬಿಜೆಪಿ ಸರ್ಕಾರ ಈ ಕಾಯ್ದೆಯನ್ನು ತಂದಾಗ ಕೂಡ ನಾವು ವಿರೋಧಿಸಿದ್ದೆವು. ಇದೀಗ ಬಿಜೆಪಿ ಸರ್ಕಾರ ಮತ್ತೊಮ್ಮೆ ಮಸೂದೆಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ” ಎಂದರು.

ಸದ್ಯ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ-1964 ಜಾರಿಯಲ್ಲಿದೆ. 2010ರಲ್ಲೂ ಕಾಯ್ದೆಯಲ್ಲಿ‌ ಬದಲಾವಣೆ ಮಾಡಲು ಆಗಿನ ಬಿಜೆಪಿ ಸರಕಾರ ಯತ್ನಿಸಿತ್ತು. ಆಗ ಪ್ರತಿಪಕ್ಷವಾಗಿದ್ದ ‌ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಜತೆಯಾಗಿ ವಿರೋಧಿಸಿದ್ದವು. ತಾನು ರಾಜ್ಯಪಾಲರು ಮತ್ತು ರಾಷ್ಟ್ರಪತಿಯನ್ನು ಭೇಟಿಯಾಗಿ ಮಸೂದೆಗೆ ಒಪ್ಪಿಗೆ ನೀಡದಂತೆ‌ ಒತ್ತಾಯಿಸಿದ್ದೆ. ಬಳಿಕ ರಾಜ್ಯಪಾಲರು ಸ್ಪಷ್ಟನೆ ಕೇಳಿದ್ದರು. ಆ ಬಳಿಕ ಸರಕಾರದ ನೇತೃತ್ವ ಬದಲಾಗಿದ್ದರಿಂದ ಈ ಮಸೂದೆಯನ್ನು ಹಿಂಪಡೆಯಲಾಯಿತು. ಹಳೆಯ ಕಾಯ್ದೆಯೇ ಜಾರಿಯಲ್ಲಿ ಉಳಿದಿದೆ ಎಂದು ಹೇಳಿದ್ದಾರೆ.