ಚಂಡಮಾರುತದ ಪರಿಣಾಮ: ಕರಾವಳಿಯಾದ್ಯಂತ ಇನ್ನೂ ಎರಡು ದಿನ ಮಳೆ ಮುಂದುವರಿಯುವ ಸಾಧ್ಯತೆ -Vishwanews24
ಚಂಡಮಾರುತದ ಪರಿಣಾಮ: ಕರಾವಳಿಯಾದ್ಯಂತ ಇನ್ನೂ ಎರಡು ದಿನ ಮಳೆ ಮುಂದುವರಿಯುವ ಸಾಧ್ಯತೆ -Vishwanews24
ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಚಂಡ ಮಾರುತ ಕಂಡು ಬಂದಿರುವ ಹಿನ್ನೆಲೆಯಲ್ಲಿ ಕರಾವಳಿಯಾದ್ಯಂತ ಇನ್ನೂ ಎರಡು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಆಗ್ನೇಯ ಅರಬಿ ಸಮುದ್ರ ಮತ್ತು ಹಿಂದೂ ಮಹಾಸಾಗರ ನಡುವಿನ ಸಮಭಾಜಕದ ಬಳಿ ಸಮುದ್ರ ಮಟ್ಟದಿಂದ 3.1 ಕಿ.ಮೀ ದೂರದಲ್ಲಿ ಚಂಡಮಾರುತವಿದೆ. ಈ ಹಿನ್ನೆಲೆ ಜಿಲ್ಲೆಯಲ್ಲಿ ಮಳೆ ಸುರಿದಿದೆ. ಹವಾಮಾನ ಇಲಾಖೆಯ ಪ್ರಕಾರ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಪರಿಣಾಮ ಗಾಳಿಯಿಂದಾಗಿ ಮೋಡಗಳ ಚಲನೆ ಹೆಚ್ಚಾಗಿ ಕರಾವಳಿ ಭಾಗದಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಚಂಡಮಾರುತದ ಪರಿಣಾಮದಿಂದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಹಲವು ಭಾಗಗಳಲ್ಲಿ ಡಿಸೆಂಬರ್ 8 ರ ಮಂಗಳವಾರ ಸಂಜೆ ಗುಡುಗು ಮತ್ತು ಮಿಂಚಿನೊಂದಿಗೆ ಭಾರಿ ಮಳೆಯಾಗಿದೆ.
ಮಂಗಳೂರು, ಬೆಳ್ತಂಗಡಿ, ಬಂಟ್ವಾಳ, ಸುಳ್ಯ, ಮೂಡುಬಿದಿರೆ, ಉಡುಪಿ, ಕಾರ್ಕಳ, ಹೆಬ್ರಿ ಮತ್ತು ಪಡುಬಿದ್ರಿಗಳಲ್ಲಿ ಉತ್ತಮ ಪ್ರಮಾಣದ ಮಳೆಯಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್ಎನ್ಡಿಎಂಸಿ) ನ ಮಾಹಿತಿ ಪ್ರಕಾರ ಮೂಡುಬಿದಿರೆಯಲ್ಲಿ 69.5 ಮಿ.ಮೀ ಮಳೆ ಸುರಿದ್ದು ಇದು ಮಂಗಳವಾರ ಸುರಿದ ಅತಿ ಹೆಚ್ಚು ಪ್ರಮಾಣದ ಮಳೆಯಾಗಿದೆ.
