ಚಕ್ರವರ್ತಿ ಸೂಲಿಬೆಲೆ, ತೇಜಸ್ವಿ ಸೂರ್ಯ ಮಹಾನ್ ದೇಶಭಕ್ತರೇನೂ ಅಲ್ಲ: ಎಚ್ ಡಿ ಕುಮಾರಸ್ವಾಮಿ -Vishwanews24
ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಮಹಾನ್ ದೇಶಭಕ್ತರೇನಲ್ಲ. ಬೆಂಗಳೂರಿಗೆ ಅವರ ಕೊಡುಗೆಯಾದರೂ ಏನು? ಅವರ ಹತ್ಯೆಗೆ ಸಂಚು ನಡೆಸಿದವರಿಗೆ ಶಿಕ್ಷೆ ಆಗಲಿ, ಆದರೆ ಅದೇ ನೆಪದಲ್ಲಿ ಒಂದು ಸಮುದಾಯದ ಬಗ್ಗೆ ದೂರುವುದು ಬೇಡ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ದೇಶದಲ್ಲಿ ಬಿಜೆಪಿ ಸಾಕಷ್ಟು ತಪ್ಪು ನಿರ್ಧಾರ ಕೈಗೊಂಡಿದೆ. ಮಂಗಳೂರು ಘಟನೆ ಸಂಬಂಧ ವಿಡಿಯೊ ಬಿಡುಗಡೆ ಮಾಡಿದ್ದೇನೆ. ಸದನದಲ್ಲಿ ನಾನು ಈ ಬಗ್ಗೆ ಹೋರಾಟ ಮಾಡುತ್ತೇನೆ. ಮೂವರು ಅಧಿಕಾರಿಗಳನ್ನು ಅಮಾನತು ಮಾಡಬೇಕು, ಇಲ್ಲವಾದರೆ ಸದನ ನಡೆಯಲು ಬಿಡುವುದಿಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ.

ಯುವ ಬ್ರಿಗೇಡ್ ಚಕ್ರವರ್ತಿ ಸೂಲಿಬೆಲೆ, ಸಂಸದ ತೇಜಸ್ವಿ ಸೂರ್ಯ ಇವರು ಮಹಾನ್ ದೇಶಭಕ್ತರೇನೂ ಅಲ್ಲ. ಯುಗಪುರುಷರೂ ಅಲ್ಲ. ಇವರೇನು ಹುತಾತ್ಮರಾಗಲೂ ಹೋಗಿಯೂ ಇಲ್ಲ. ತೇಜಸ್ವಿ ಸೂರ್ಯ ಬೆಂಗಳೂರಿಗೆ ನೀಡಿದ ಕೊಡುಗೆಯಾದರು ಏನು? ಇವರೇನು ಸಾಧನೆ ಮಾಡಿದ್ದಾರೆ ಎಂದು ಇವರ ಕೊಲೆಗೆ ಯತ್ನಿಸುತ್ತಾರೆ. ಯಾರೋ ತಪ್ಪು ಮಾಡಿದ ಮಾತ್ರಕ್ಕೆ ಒಂದು ಸಮುದಾಯದ ಮೇಲೆ ತಪ್ಪು ಹೊರಿಸಬಾರದು. ತನಿಖೆ ಮಾಡಿ ಸತ್ಯ ಇದ್ದರೆ ಯಾವುದೇ ಸಂಘಟನೆ ಕ್ರಮ ತೆಗೆದುಕೊಳ್ಳಲಿ ಎಂದು ಕುಮಾರಸ್ವಾಮಿ ಆಗ್ರಹಿಸಿದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
