ಚಕ್ರವರ್ತಿಯು ಬೆತ್ತಲೆಯಾಗಿದ್ದಾನೆ, ಈಗ ಅವನು ಬೇರೊಬ್ಬರ ಸಹಾಯ ಪಡೆದುಕೊಳ್ಳುವಂತಾಗಿದೆ : ಪ್ರಕಾಶ್ ರಾಜ್ – vishwanews24
ಅಹಂಕಾರವನ್ನು ಪಂಕ್ಚರ್ ಮಾಡಿ ಅವರ ಸ್ಥಾನವನ್ನು ತೋರಿಸಿದ್ದಕ್ಕೆ ಧನ್ಯವಾದಗಳು: ಪ್ರಕಾಶ್ ರಾಜ್
ಬೆಂಗಳೂರು : ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಆಡಳಿತರೂಢ ಬಿಜೆಪಿ ಪಕ್ಷವು ಸರಳ ಬಹುಮತ ಪಡೆಯುವಲ್ಲಿ ಎಡವಿದೆ. ಪರಿಣಾಮ ಬಿಜೆಪಿ ತನ್ನ ಮೈತ್ರಿಕೂಟದ ಇತರೆ ಪಕ್ಷಗಳ ಬೆಂಬಲವನ್ನು ಒಟ್ಟುಗೂಡಿಸುವ ಪರಿಸ್ಥಿತಿ ಬಂದೊದಗಿದೆ.
7ನೇ ಹಂತದ ಲೋಕಸಭಾ ಚುನಾವಾಣೆಯ ಬಳಿಕ ಪ್ರಕಟಗೊಂಡಿದ್ದ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಹುತೇಕ ಎಲ್ಲಾ ಸಮೀಕ್ಷೆಗಳಲ್ಲೂ ಬಿಜೆಪಿ ನೇತೃತ್ವದ ಎನ್ಡಿಎಗೆ ಭಾರೀ ಬಹುಮತದ ಜಯ ಎಂದು ಭವಿಷ್ಯ ನುಡಿದಿತ್ತು. ಆದರೆ ಇದಕ್ಕೆ ವಿರುದ್ಧವಾಗಿ ಮತದಾರ ಫಲಿತಾಂಶ ನೀಡಿದ್ದಾನೆ.
ಉಡುಪಿ: ಶಾಲಾ ಬಸ್ ಚಾಲಕನಿಗೆ ಲಘು ಹೃದಯಾಘಾತ ; ವಿದ್ಯಾರ್ಥಿಗಳು ಪಾರು – vishwanews24
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಬಹುಬಾಷಾ ನಟ ಪ್ರಕಾಶ್ ರಾಜ್ ಅವರು, “ಚಕ್ರವರ್ತಿಯು ಬೆತ್ತಲೆಯಾಗಿದ್ದಾನೆ, ಈಗ ಅವನು ಬೇರೊಬ್ಬರ ಸಹಾಯ ಪಡೆದುಕೊಳ್ಳುವಂತಾಗಿದೆ. ಇಂಡಿಯಾ ಮತ್ತು ಜವಾಬ್ದಾರಿಯುತ ನಾಗರಿಕ ಸಮಾಜಕ್ಕೆ ಧನ್ಯವಾದಗಳು. ಅಹಂಕಾರವನ್ನು ಪಂಕ್ಚರ್ ಮಾಡಿ ಅವರ ಸ್ಥಾನವನ್ನು ತೋರಿಸಿದ್ದಕ್ಕೆ ಧನ್ಯವಾದಗಳು. ನಾವು ನಮ್ಮ ದೇಶಕ್ಕಾಗಿ ಉತ್ತಮವಾಗಿ ಹೋರಾಡಿದ್ದೇವೆ” ಎಂದು ಹೇಳಿದ್ದಾರೆ.
ಮೋದಿ ಸರ್ಕಾರ ರಚನೆಗೆ ಬೆಂಬಲ ಪತ್ರ ನೀಡಿದ ನಿತೀಶ್, ಚಂದ್ರಬಾಬು ನಾಯ್ಡು – vishwanews24
