ಚನ್ನಪಟ್ಟಣ ಉಪಚುನಾವಣೆ  : ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಕಣಕ್ಕೆ – vishwanews24

Featured, ರಾಜ್ಯ ನ್ಯೂಸ್

ಚನ್ನಪಟ್ಟಣ ಉಪಚುನಾವಣೆ  : ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಕಣಕ್ಕೆ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ  ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿಯನ್ನು ಜೆಡಿಎಸ್‌ ಕಣಕ್ಕೆ ಇಳಿಸಿದೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಹೆಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ ನಾಯಕರ ಜೊತೆ ನಡೆಸಿದ ಸಭೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ, ಕಾರ್ಯಕರ್ತರ ಒತ್ತಡಕ್ಕೆ ಮಣಿದು ನಿಖಿಲ್ ಸ್ಪರ್ಧೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಅವರಿಗೆ ಕುಮಾರಸ್ವಾಮಿಯನ್ನ ಹೇಗಾದ್ರು ಮುಗಿಸಬೇಕು ಅಂತ ಇದೆ.ಚನ್ನಪಟ್ಟಣದ ಕಾರ್ಯಕರ್ತರು, ಜನರು ಇದಕ್ಕೆ ಉತ್ತರ ಕೊಡಬೇಕು. ನಾನೇ ಚನ್ನಪಟ್ಟಣಕ್ಕೆ ಬಂದು ‌ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದರು.

ಯೋಗೀಶ್ವರ್ ಗೆಲ್ಲುವ ಮೂಲಕ‌ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಿ : ಸಿದ್ದರಾಮಯ್ಯ ಕರೆ – vishwanews24

ಶಾಸಕ ಎ. ಮಂಜು, ಪಕ್ಷಕ್ಕಾಗಿ ನಿಖಿಲ್ ಸ್ಪರ್ಧೆ ಮಾಡುತ್ತಾರೆ. ಎನ್‌ಡಿಎ ಅಭ್ಯರ್ಥಿ ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Leave a Reply