ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಗೆ ಢಿಕ್ಕಿ – ಕಾರಿನಲ್ಲಿದ್ದ 7 ಜನ ಸಜೀವ ದಹನ – Vishwanews24

Featured, ರಾಷ್ಟ್ರ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಗೆ ಢಿಕ್ಕಿ – ಕಾರಿನಲ್ಲಿದ್ದ 7 ಜನ ಸಜೀವ ದಹನ

ರಾಜಸ್ಥಾನ: ಟ್ರಕ್​ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ತಕ್ಷಣ ಬೆಂಕಿ ಕಾಣಿಸಿಕೊಂಡಿದ್ದು, ಒಂದೇ ಕುಟುಂಬದ ಕಾರಿನಲ್ಲಿದ್ದ 7 ಜನ ಸಜೀವದಹನವಾಗಿರುವ ದಾರುಣ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ಸಂಭವಿಸಿದೆ.

ಮೃತರನ್ನು ನೀಲಂ ಗೋಯಲ್ (55), ಅವರ ಮಗ ಅಶುತೋಷ್ ಗೋಯಲ್ (35), ಮಂಜು ಬಿಂದಾಲ್ (58), ಅವರ ಮಗ ಹಾರ್ದಿಕ್ ಬಿಂದಾಲ್ (37), ಅವರ ಪತ್ನಿ ಸ್ವಾತಿ ಬಿಂದಾಲ್ (32) ಮತ್ತು ಅವರ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳು ಎಂದು ಗುರುತಿಸಲಾಗಿದೆ.

ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಯುವಕ ಸಾವು, ಇಬ್ಬರ ಸ್ಥಿತಿ ಗಂಭೀರ – Vishwanews24

ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಉತ್ತರ ಪ್ರದೇಶದ ಮೀರತ್ ನಿವಾಸಿಗಳಾಗಿದ್ದು, ರಾಜಸ್ಥಾನದ ಸಲಾಸರ್ ನಲ್ಲಿರುವ ಸಲಾಸರ್ ಬಾಲಾಜಿ ದೇವಸ್ಥಾನಕ್ಕೆ ತೆರಳಿ ಹಿಂತಿರುಗುತ್ತಿದ್ದರು. ಚುರು ಕಡೆಗೆ ಹೋಗುತ್ತಿದ್ದ ಕಾರು ಚಾಲಕ ಟ್ರಕ್ ಅನ್ನು ಹಿಂದಿಕ್ಕಲು ಪ್ರಯತ್ನಿಸುತ್ತಿದ್ದ. ಈ ವೇಳೆ ಎದುರಿನಿಂದ ಇನ್ನೊಂದು ವಾಹನ ಬಂದಿದ್ದು, ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಪ್ರಯತ್ನದಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಗೆ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಎಲ್‌ಪಿಜಿ ಕಿಟ್‌ಗೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಟ್ರಕ್ ನಲ್ಲಿ ತುಂಬಿದ್ದ ಹತ್ತಿ ಬೆಂಕಿಯನ್ನು ಮತ್ತಷ್ಟು ಹೆಚ್ಚಿಸಿದೆ. ಈ ಸಂದರ್ಭ ಸ್ಥಳದಲ್ಲಿದ್ದವರು ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಕಾರು ಬೀಗ ಹಾಕಿದ್ದ ಬಾಗಿಲು ತೆರೆಯಲು ಸಾಧ್ಯವಾಗದೆ ಕಾರಿನಲ್ಲಿದ್ದ ಪ್ರಯಾಣಿಕರು ಸಜೀವವಾಗಿ ದಹನವಾಗಿದ್ದಾರೆ. ಬಳಿಕ ಅಗ್ನಿಶಾಮಕ ದಳದವರು ಬೆಂಕಿ ನಂದಿಸಲು ಹರಸಾಹಸ ಪಟ್ಟರೂ ಬೆಂಕಿಯನ್ನು ನಿಯಂತ್ರಣಕ್ಕೆ ತರುವಷ್ಟರಲ್ಲಿ ಕಾರಿನಲ್ಲಿದ್ದವರು ಮೃತಪಟ್ಟಿದ್ದಾರೆ.

ಮಂಗಳೂರು : ಅಸಂಖ್ಯಾತ ಬಿಜೆಪಿ ಕಾರ್ಯಕರ್ತರ ಜೊತೆ ಕೋಟ ಹಾಗೂ ಚೌಟ ಪರ ಪ್ರಧಾನಿ ಅದ್ದೂರಿ ರೋಡ್ ಶೋ.. Vishwanews24

Leave a Reply