ಚಿಕ್ಕಮಗಳೂರು : ಬುರ್ಖಾ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶಕ್ಕೆ ಅನುಮತಿ ನೀಡದ ಹಿನ್ನೆಲೆ : ಐಡಿಎಸ್ ಜಿ ಕಾಲೇಜು ಮುಂಭಾಗ ವಿದ್ಯಾರ್ಥಿನಿಯರ ಪ್ರತಿಭಟನೆ – Vishwanews24

Featured, ರಾಜ್ಯ ನ್ಯೂಸ್

ಚಿಕ್ಕಮಗಳೂರು : ಕಾಲೇಜಿಗೆ ಬುರ್ಖಾ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶಕ್ಕೆ ಅನುಮತಿ ನೀಡದ ಹಿನ್ನೆಲೆ : ಐಡಿಎಸ್ ಜಿ ಕಾಲೇಜು ಮುಂಭಾಗ ವಿದ್ಯಾರ್ಥಿನಿಯರ ಪ್ರತಿಭಟನೆ – Vishwanews24

ಚಿಕ್ಕಮಗಳೂರು: ಚಿಕ್ಕಮಗಳೂರಿನ ಐಡಿಎಸ್ ಜಿ ಸರಕಾರಿ ಕಾಲೇಜಿಗೆ ಬುರ್ಖಾ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶಕ್ಕೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಕಾಲೇಜು ಮುಂಭಾಗ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ ಘಟನೆ ಬುಧವಾರ ನಡೆದಿದೆ.

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂಬುದಾಗಿ ಮಂಗಳವಾರವಷ್ಟೇ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು. ಆದರೆ ಬುಧವಾರ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿನಿಯರು ಬುರ್ಖಾ ಧರಿಸಿ ಬಂದಿದ್ದರು.

ಕೋರ್ಟ್ ತೀರ್ಪು ಜಾರಿಯಲ್ಲಿರುವುದರಿಂದ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶಿಸಲು ಅನುಮತಿ ನಿರಾಕರಿಸಲಾಯಿತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

 ಪಂಜಾಬ್ ನ 18 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಭಗವಂತ್ ಮಾನ್ – Vishwanews24

Leave a Reply