ಚಿಕ್ಕಮಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವಕನ ತಲೆಯ ಮೇಲೆ ಬಿದ್ದ ವಿದ್ಯುತ್ ಕಂಬ -vishwanews24
ನಡೆದುಕೊಂಡು ಹೋಗುತ್ತಿದ್ದ ಯುವಕನ ತಲೆಯ ಮೇಲೆ ಬಿದ್ದ ವಿದ್ಯುತ್ ಕಂಬ ; ಪ್ರಣಾಪಾಯದಿಂದ ಪಾರು
ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮಳೆ ಮುಂದುವರೆದಿದೆ. ಅಲ್ಲಲ್ಲಿ ಆಗಾಗ್ಗೆ ಮಳೆಯಾಗುತ್ತಿದ್ದು ಮಳೆ ಸ್ವಲ್ಪಮಟ್ಟಿಗೆ ಕ್ಷೀಣಿಸಿದ್ದರು ಗಾಳಿಯ ಆರ್ಭಟ ಜೋರಾಗಿದೆ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಯುವಕನ ತಲೆಯ ಮೇಲೆ ವಿದ್ಯುತ್ ಕಂಬ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕು ತುಂಬರಗಡಿ ಗ್ರಾಮದಲ್ಲಿ ನಡೆದಿದೆ.
ಭಾನುವಾರ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕೂದಲೆಳೆ ಅಂತರದಲ್ಲಿ ಕಾರಿನಲ್ಲಿದ್ದವರು ಪಾರಾಗಿದ್ದಾರೆ. ಅಂತಹದೆ ಘಟನೆ ಸೋಮವಾರ ನಡೆದಿದ್ದು ನಡೆದು ಹೋಗುತ್ತಿದ್ದ ವ್ಯಕ್ತಿಯ ಮೇಲೆ ವಿದ್ಯುತ್ ಕಂಬ ಬಿದ್ದು ಸ್ವಲ್ಪದರಲ್ಲಿ ಪ್ರಣಾಪಾಯದಿಂದ ಪಾರಾಗಿದ್ದಾನೆ.
ಕಣ್ಣುಗಳಿಗೆ ಕುತ್ತು ತಂದ ಲೆನ್ಸ್ ; ಕಾರ್ನಿಯಾ ಗಾಯದಿಂದ ಶಸ್ತ್ರಚಿಕಿತ್ಸೆಗೆ ಒಳಗಾದ ನಟಿ – vishwanews24
ಮೂಡಿಗೆರೆ ತಾಲೂಕು ತುಂಬರಗಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ದಿವೀತ್ ಎಂಬ ಯುವಕ ಬಸ್ ಇಳಿದು ಮನೆಗೆ ತೆರಳುತ್ತಿದ್ದ ಈ ವೇಳೆ ವಿದ್ಯುತ್ ಕಂಬ ಮೈಮೇಲೆ ಬಿದ್ದಿದೆ. ಯುವಕನ ತಲೆಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
