ಚೀನಾದಲ್ಲಿ ಆತಂಕ ಸೃಷ್ಟಿಸಿದ ಕೊರೋನಾ ವೈರಸ್, ದೇಶದಾದ್ಯಂತ ಭಾರೀ ಮುನ್ನೆಚ್ಚರಿಕೆ ಕ್ರಮ -Vishwanews24

Featured, ರಾಷ್ಟ್ರ ನ್ಯೂಸ್

ನವದೆಹಲಿ: ಚೀನಾದಲ್ಲಿ ಅಲ್ಲೋಲ ಕಲ್ಲೋಲಕ್ಕೆ ಕಾರಣಗಿರುವ ಕೊರೋನಾ ವೈರಸ್ ಭಾರತದಲ್ಲೂ ಆತಂಕ ಸೃಷ್ಟಿಸಿದೆ.ಮಾರಕ ವೈರಸ್ ಹಿನ್ನೆಲೆಯಲ್ಲಿ ದೇಶಾದ್ಯಂತ ಭಾರೀ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.

ಇದೀಗ ದೆಹಲಿಯ ಡಾ. ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ (ಆರ್‌ಎಂಎಲ್) ಸೇರಿರುವ ಮೂರು ಮಂದಿಗೆ ಶಂಕಿತ ಕರೋನ ವೈರಸ್ ಸೋಂಕು ತಗಲಿರುವುದು ಪತ್ತೆಯಾಗಿವೆ. ಮೂವರ ರಕ್ತದ ಮಾದರಿಗಳನ್ನು ಪರೀಕ್ಷೆಗಾಗಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರಕ್ಕೆ (ಎನ್‌ಸಿಡಿಸಿ) ಕಳುಹಿಸಲಾಗಿದೆ.ಭಾನುವಾರದವರೆಗೆ ದೇಶಕ್ಕೆ 137 ವಿಮಾನಗಳ ಮೂಲಕ 29707 ಪ್ರಯಾಣಿಕರು ಆಗಮಿಸಿದ್ದಾರೆ.

ಚೀನಾದಲ್ಲಿ ಕೊರೋನಾ ವೈರಸ್‌‌ಗೆ ಸಾವನ್ನಪ್ಪಿದವರ ಸಂಖ್ಯೆ 106 ಕ್ಕೆ ಏರಿಕೆಯಾಗಿದೆ. ಮಾತ್ರವಲ್ಲದೆ 1,300 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಕೇರಳವೊಂದರಲ್ಲಿ 100 ಮಂದಿಯನ್ನು ನಿಗಾ ಸ್ಥಿತಿಯಲ್ಲಿ ಇರಿಸಲಾಗಿದೆ.

ಕೊರೋನಾ ವೈರಸ್ ಸೋಂಕು ಭಾರತಕ್ಕೂ ಕಾಲಿಡುವ ಭೀತಿ ಹಿನ್ನೆಲಯಲ್ಲಿ ದೇಶದಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದ. ಬೆಂಗಳೂರು ಸೇರಿ ದೇಶದ ವಿವಿಧೆಡೆ ಚೀನಾದಿಂದ ಬಂದ ಪ್ರಯಾಣಿಕರ ಮೇಲೆ ನಿಗಾ ಇಡಲಾಗಿದ್ದು, ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.