ಚುನಾವಣಾ ರಾಜಕೀಯಕ್ಕೆ ಪ್ರಿಯಾಂಕಾ ಗ್ರ್ಯಾಂಡ್‌ ಎಂಟ್ರಿ  ; ವಯನಾಡಿನಿಂದ ನಾಮಪತ್ರ ಸಲ್ಲಿಕೆ – vishwanews24

Featured, ರಾಷ್ಟ್ರ ನ್ಯೂಸ್

ಚುನಾವಣಾ ರಾಜಕೀಯಕ್ಕೆ ಪ್ರಿಯಾಂಕಾ ಗ್ರ್ಯಾಂಡ್‌ ಎಂಟ್ರಿ  ; ವಯನಾಡಿನಿಂದ ನಾಮಪತ್ರ ಸಲ್ಲಿಕೆ

ವಯನಾಡ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಮಪತ್ರ ಸಲ್ಲಿಕೆಗೂ ಮುನ್ನ ವಯನಾಡು ಕ್ಷೇತ್ರದಲ್ಲಿ ಅದ್ಧೂರಿ ರೋಡ್ ಶೋ ಮಾಡಿದರು. ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿರುವ ವಯನಾಡ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ರಾಯ್‌ಬರೇಲಿ ಮತ್ತು ವಯನಾಡಿನಿಂದ ಸ್ಪರ್ಧಿಸಿ ಎರಡೂ ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದರು. ನಂತರ ವಯನಾಡಿನ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಈ ಕ್ಷೇತ್ರದಿಂದ ಸೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ ಮಾಡುತ್ತಿದ್ದಾರೆ. ಇದು ಪ್ರಿಯಾಂಕಾ ಅವರ ರಾಜಕೀಯ ಜೀವನದ ಮೊದಲ ಚುನಾವಣೆಯಾಗಿದೆ.

ಯಾವುದೇ ಷರತ್ತು ಇಲ್ಲದೇ ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಬಂದಿದ್ದೇನೆ : ಸಿ.ಪಿ ಯೋಗೇಶ್ವರ್‌ – vishwanews24

ಇಂದು ಬೆಳಗ್ಗೆ ವಯನಾಡಿನ ಕಲ್ಲಾಪೆಟ್ಟಾ ನ್ಯೂ ಬಸ್ ಸ್ಟಾಂಡ್‌ನಿಂದ ಬೃಹತ್ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆಗೆ ಪ್ರಿಯಾಂಕಾ ಗಾಂಧಿ ತೆರಳಿದರು. ಈ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪತಿ ರಾಬರ್ಟ್ ವಾದ್ರಾ ಸೇರಿದಂತೆ ಹಲವು ಗಣ್ಯರು ಪ್ರಿಯಾಂಕಾ ಗಾಂಧಿಯವರಿಗೆ ಸಾಥ್ ನೀಡಿದರು. ಅದ್ಧೂರಿ ಮೆರವಣಿಗೆ ಬಳಿಕ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕರು ಭಾಗಿಯಾದರು. ಸಮಾವೇಶದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು. ನಂತರ ವಯನಾಡು ಜಿಲ್ಲಾಧಿಕಾರಿ ಕಚೇರಿಗೆ ಪತಿ ಮತ್ತು ಪುತ್ರನ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು.

Leave a Reply