ಚೆಕ್ ಬೌನ್ಸ್ ಪ್ರಕರಣ : ತೆಲುಗು ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಮೂರು ತಿಂಗಳು ಜೈಲು ಶಿಕ್ಷೆ – vishwanews24

Featured, ರಾಷ್ಟ್ರ ನ್ಯೂಸ್

ಚೆಕ್ ಬೌನ್ಸ್ ಪ್ರಕರಣ : ತೆಲುಗು ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಮೂರು ತಿಂಗಳು ಜೈಲು ಶಿಕ್ಷೆ

7 ವರ್ಷದ ಹಿಂದಿನ ಚೆಕ್ ಬೌನ್ಸ್ ಪ್ರಕರಣದಲ್ಲಿ ಮುಂಬೈ ಸ್ಥಳೀಯ ಕೋರ್ಟ್ ತೆಲುಗು ನಿರ್ದೇಶಕ ರಾಮ್ ಗೋಪಾಲ್ ವರ್ಮಾ  ಅವರನ್ನು ದೋಷಿ ಎಂದು ಹೇಳಿದೆ.

2018ರಲ್ಲಿ ಮುಂಬೈನಲ್ಲಿ ರಾಮ್ ಗೋಪಾಲ್ ವರ್ಮಾ ವಿರುದ್ಧ ಚೆಕ್ ಬೌನ್ಸ್  ಕೇಸ್ ದಾಖಲಾಗಿತ್ತು. ಮಹೇಶ್ಚಂದ್ರ ಮಿಶ್ರಾ ಎನ್ನುವವರು ನಿರ್ದೇಶಕನ ಮೇಲೆ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಕೋರ್ಟ್‌ಗೆ ಹಾಜರಾಗುವಂತೆ ಸೂಚನೆ ಕೊಟ್ಟಿದ್ದರೂ ಕೂಡ ಅವರು ಹಾಜರಾಗಿರಲಿಲ್ಲ.

ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿ ಮೂರು ತಿಂಗಳ ಒಳಗಾಗಿ ಮಿಶ್ರಾ ಅವರಿಗೆ 3.72 ಲಕ್ಷ ರೂಪಾಯಿ ಪರಿಹಾರ ಕೊಡುವಂತೆ ಆದೇಶಿಸಿದೆ. ಒಂದು ವೇಳೆ ಈ ಅವಧಿಯ ಒಳಗಾಗಿ ಹಣ ಪಾವತಸಿದೇ ಇದ್ದರೆ 3 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಎಂದು ಆದೇಶದಲ್ಲಿ ತಿಳಿಸಿದೆ.

ಉಡುಪಿಯಲ್ಲಿ ಮಂಗನ ಕಾಯಿಲೆ ಪತ್ತೆ: ರೋಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ : ಜಿಲ್ಲಾಧಿಕಾರಿ – vishwanews24

Leave a Reply