ಚೆಕ್ ಬೌನ್ಸ್  ಪ್ರಕರಣ : ನಿರ್ದೇಶಕ ಗುರುಪ್ರಸಾದ್ ಬಂಧನ – Vishwanews24

Featured, ರಾಜ್ಯ ನ್ಯೂಸ್

ಚೆಕ್ ಬೌನ್ಸ್  ಪ್ರಕರಣ : ನಿರ್ದೇಶಕ ಗುರುಪ್ರಸಾದ್ ಬಂಧನ

ಮಠ, ಎದ್ದೇಳು ಮಂಜುನಾಥ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿರುವ ಪ್ರತಿಭಾವಂತ ನಿರ್ದೇಶಕ ಗುರುಪ್ರಸಾದ್  ಅವರನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಚೆಕ್ ಬೌನ್ಸ್  ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನವಾಗಿದ್ದು , ನಂತರ ಅವರನ್ನು ನ್ಯಾಯಾಲಯಕ್ಕೆ ಕರೆದೊಯ್ಯಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ತಮ್ಮೊಂದಿಗೆ ಕೆಲಸ ಮಾಡುತ್ತಿದ್ದ ಶ್ರೀನಿವಾಸ್ ಎನ್ನುವವರಿಂದ ಗುರು ಪ್ರಸಾದ್ 30 ಲಕ್ಷ ರೂಪಾಯಿಯನ್ನು ಸಾಲವಾಗಿ ಪಡೆದುಕೊಂಡಿದ್ದರು. ಸಿನಿಮಾ ಮಾಡುವುದಾಗಿ ಸಾಲ ಪಡೆದಿದ್ದ ಗುರುಪ್ರಸಾದ್, ನಂತರ ಹಣ ಕೊಡದೇ ವಂಚಿಸಿದ್ದರು. ಹಣ ಕೇಳುವುದಕ್ಕೆ ಹೋದವರ ಮೇಲೆಯೇ ಸುಳ್ಳು ಕೇಸ್ ಅನ್ನು ಕೂಡ ದಾಖಲಿಸಿದ್ದರು. ಹಾಗಾಗಿ ಶ್ರೀನಿವಾಸ್ ಅವರು ಗುರುಪ್ರಸಾದ್ ಮೇಲೆ ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದರು.

ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಗುಜರಾತ್‌ನಲ್ಲಿ ಬಂಧನ – Vishwanews24

ಶ್ರೀನಿವಾಸ್ ದೂರು ನೀಡಿದ ಹಿನ್ನೆಲೆಯಲ್ಲಿ ಕೋರ್ಟ್ ನಿಂದ ಎನ್.ಬಿ ಡಬ್ಲ್ಯು ಜಾರಿ ಆಗಿತ್ತು. ಎನ್.ಐ ಆಕ್ಟ್ ಅಡಿ ಗುರುಪ್ರಸಾದ್ ವಿರುದ್ದ ಚೆಕ್ ಬೌನ್ಸ್ ಕೇಸ್ ನಲ್ಲಿ ವಾರೆಂಟ್ ಜಾರಿ ಆಗಿತ್ತು. ಹಾಗಾಗಿ ಗಿರಿನಗರ ಪೊಲೀಸರು ಗುರುಪ್ರಸಾದ್ ಅವರನ್ನು ಬಂಧಿಸಿ, ಮೆಡಿಕಲ್ ಟೆಸ್ಟ್ ನಂತರ ಕೋರ್ಟ್ ಮುಂದೆ ಹಾಜರು ಪಡಿಸಲು ಕರೆದುಕೊಂಡು ಹೋಗಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Leave a Reply