ಚೆನ್ನೈ: ಅಕ್ರಮ ಕಳ್ಳಭಟ್ಟಿ ಸೇವಿಸಿ 25 ಮಂದಿ ಸಾವು ;  60 ಜನರು ಅಸ್ವಸ್ಥ – vishwanews24

Featured, ರಾಷ್ಟ್ರ ನ್ಯೂಸ್

ಚೆನ್ನೈ: ಅಕ್ರಮ ಕಳ್ಳಭಟ್ಟಿ ಸೇವಿಸಿ 25 ಮಂದಿ ಸಾವು ;  60 ಜನರು ಅಸ್ವಸ್ಥ

ಕಲ್ಲಾಕುರಿಚಿ ಜಿಲ್ಲಾಧಿಕಾರಿ ಶ್ರವಣ್ ಕುಮಾರ್ ವರ್ಗಾವಣೆ.. 10 ಸಿಬ್ಬಂದಿ ಅಮಾನತು

ಚೆನ್ನೈ: ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದ ಕಳ್ಳಭಟ್ಟಿ ಸೇವಿಸಿ 25 ಮಂದಿ ಸಾವನ್ನಪ್ಪಿದ ದುರ್ಘಟನೆ ತಮಿಳುನಾಡಿನ ಉತ್ತರ ಭಾಗದ ಕಲ್ಲಾಕುರಿಚಿ ಜಿಲ್ಲೆಯಲ್ಲಿ ನಡೆದಿದೆ. ಸುಮಾರು 60 ಜನರು ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಳ್ಳಭಟ್ಟಿ ಸೇವಿಸಿ ಅಸ್ವಸ್ಥರಾದ ಜನರನ್ನು ಜಿಲ್ಲಾ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಜಿಲ್ಲಾಧಿಕಾರಿ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಪ್ರಕರಣ ಸಂಬಂಧ ಕೆ.ಕನ್ನುಕುಟ್ಟಿ (49) ಎನ್ನುವ ವ್ಯಕ್ತಿಯನ್ನು ಬಂಧಿಸಲಾಗಿದೆ. ಅಲ್ಲದೇ ಬಂಧಿತನಿಂದ ಸುಮಾರು 200 ಲೀಟರ್ ಅಕ್ರಮ ಅರಕ್‌ ಅನ್ನು ವಶಕ್ಕೆ ಪಡೆದು ತಪಾಸಣೆ ಮಾಡಲಾಗಿದೆ. ಈ ವೇಳೆ ಇದರಲ್ಲಿ ಮಾರಣಾಂತಿಕ ಮೆಥನಾಲ್ ಅನ್ನು ಹೆಚ್ಚಾಗಿ ಬಳಕೆ ಮಾಡಲಾಗಿದೆ ಎಂಬುದು ತನಿಖೆಯಿಂದ ತಿಳಿದು ಬಂದಿದೆ.

ಕುಂದಾಪುರ: ಅಲೆಗಳ ಅಬ್ಬರಕ್ಕೆ ಸಿಲುಕಿ ಯುವಕ ಸಮುದ್ರಪಾಲು – vishwanews24

ಕಳ್ಳಭಟ್ಟಿ ಸೇವಿಸಿ ಸಾವನ್ನಪ್ಪಿದವರು ಸುದ್ದಿ ತಿಳಿದು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ದುಃಖ ವ್ಯಕ್ತಪಡಿಸಿದ್ದಾರೆ. ಇಂತಹ ಅಪರಾಧಗಳಲ್ಲಿ ಭಾಗಿಯಾದವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಸಮಾಜವನ್ನು ಹಾಳು ಮಾಡುವ ಇಂತಹ ಅಪರಾಧಗಳನ್ನು ತಡೆದು ಶಿಕ್ಷೆ ನೀಡಲಾಗುವುದು ಎಂಂದು ಹೇಳಿದ್ದಾರೆ.

ಇನ್ನು ಘಟನೆಗೆ ಕಾರಣರಾದ ಆರೋಪಿಗಳ ಬಂಧಿಸಲಾಗಿದೆ ಎಂದ ತಮಿಳುನಾಡು ಸರ್ಕಾರ ಹೇಳಿದೆ. ಮೃತರ ಕುಟುಂಬಗಳಿಗೆ ರಾಜ್ಯಪಾಲ ಆರ್.ಎನ್.ರವಿ ಸಾಂತ್ವನ ಹೇಳಿದ್ದಾರೆ.

ಘಟನೆ ಸಂಬಂಧ ಕಲ್ಲಾಕುರಿಚಿ ಜಿಲ್ಲಾಧಿಕಾರಿ ಶ್ರವಣ್ ಕುಮಾರನ್ನ ವರ್ಗಾವಣೆ ಮಾಡಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಸಮಯ್ ಸಿಂಗ್ ಮೀನಾ ಮತ್ತು 9 ಸಿಬ್ಬಂದಿಯನ್ನ ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ : ತಮ್ಮ ಕುಟುಂಬದ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆಯಾಜ್ಞೆ ತಂದ ವಿಜಯಲಕ್ಷ್ಮೀ – vishwanews24

Leave a Reply