ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದಂತೆ ಗೃಹ ಲಕ್ಷ್ಮಿ ಯೋಜನೆ ಜಾರಿಗೆ : ಪ್ರಿಯಾಂಕಾ ಗಾಂಧಿ ಘೋಷಣೆ – vishwanews24
ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದಂತೆ ಗೃಹ ಲಕ್ಷ್ಮಿ ಯೋಜನೆ ಜಾರಿಗೆ : ಪ್ರಿಯಾಂಕಾ ಗಾಂಧಿ ಘೋಷಣೆ
ನವದೆಹಲಿ: ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಕರ್ನಾಟಕದಂತೆ ‘ಗೃಹ ಲಕ್ಷ್ಮಿ ಯೋಜನೆ’ಯನ್ನು ಜಾರಿಗೆ ತರಲಾಗುವುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಘೋಷಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, “‘ಗೃಹ ಲಕ್ಷ್ಮಿ ಯೋಜನೆ’ ಅನ್ನು ಛತ್ತೀಸ್‌ಗಢದಲ್ಲಿಯೂ ಜಾರಿಗೆ ತರಲಾಗುವುದು. ಈ ಯೋಜನೆ ಅಡಿ ವರ್ಷಕ್ಕೆ 15,000 ರೂ.ಗಳನ್ನು ಮಹಿಳೆಯರ ಖಾತೆಗಳಿಗೆ ಜಮೆ ಮಾಡಲಾಗುವುದು. ಇದರೊಂದಿಗೆ ಪ್ರತಿ ಎಲ್‌ಪಿಜಿ ಸಿಲಿಂಡರ್ 500 ರೂ. ಸಬ್ಸಿಡಿ ಇರುತ್ತದೆ ಎಂದು ಭರವಸೆ ನೀಡಿದ್ದಾರೆ.
ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಸ್ವ-ಸಹಾಯ ಗುಂಪುಗಳು ಮತ್ತು ಸಕ್ಷಮ್ ಯೋಜನೆಗಳ ಸಾಲಗಳನ್ನು ಮನ್ನಾ ಮಾಡಲಾಗುವುದು. ಛತ್ತೀಸ್‌ಗಢದ ಕಾಂಗ್ರೆಸ್ ಸರ್ಕಾರ, ರೈತರು, ಕಾರ್ಮಿಕರು, ಮಹಿಳೆಯರು, ಆದಿವಾಸಿಗಳು, ದಲಿತರು ಮತ್ತು ಬಡವರ ಸಮೃದ್ಧಿಯ ಮಾದರಿಯನ್ನು ಪ್ರಸ್ತುತಪಡಿಸಿದೆ ಎಂದು ಅವರು ಹೇಳಿದ್ದಾರೆ.
